ದೇಶ

ಮೇಘಾಲಯದಲ್ಲಿ ಕಣಿವೆಗೆ ಉರುಳಿದ ಬಸ್, 30 ಸಾವು

ಮೇಘಾಲಯದ ಪೂರ್ವ ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಬಸ್​ವೊಂದು ಸುಮಾರು 500 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಮತ್ತು 11...

ಗುವಾಹತಿ: ಮೇಘಾಲಯದ ಪೂರ್ವ ಕಾಶಿ ಹಿಲ್ಸ್ ಜಿಲ್ಲೆಯಲ್ಲಿ ಬಸ್​ವೊಂದು ಸುಮಾರು 500 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ ಮತ್ತು 11 ಮಂದಿ ಗಾಯಗೊಂಡಿದ್ದಾರೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 9.45ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಸಿಲ್ಚರ್ ನಿಂದ ಅಸ್ಸಾಂನ ಗುವಾಹತಿಗೆ ತೆರಳುತ್ತಿದ್ದ ಬಸ್ ಮೇಘಾಲಯದ ಗಡಿಗೆ ಹೊಂದಿಕೊಂಡಂತಿರುವ ಸೋನಾಪುರ್ ಬಳಿ ಕಣಿವೆಗೆ ಉರುಳಿದೆ ಎಂದು ಮೇಘಾಲಯ ಪೊಲೀಸ್ ಮಹಾ ನಿರ್ದೇಶಕ ರಾಜೀವ್ ಮೆಹ್ತಾ ಅವರು ಹೇಳಿದ್ದಾರೆ.
ಇಂದು ಬೆಳಗ್ಗೆ ಬಿಎಸ್ ಎಫ್ ಸಿಬ್ಬಂದಿ ಧಾವಿಸಿದ್ದು, ಸ್ಥಳೀಯ ನೆರವಿನೊಂದಿಗೆ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೆ ಗಾಯಾಳುಗಳನ್ನು ಶಿಲಾಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಳೆ ಬರುತ್ತಿರುವುದರಿಂದ ಮತ್ತು ಕಣಿವೆ ಸಾಕಷ್ಟು ಆಳವಾಗಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ತೊಡಕಾಗುತ್ತಿದೆ ಎಂದು ಕಾಶಿ ಹಿಲ್ಸ್ ಜಿಲ್ಲೆಯ ಎಸ್​ಪಿ ಲೆಥೀಂದ್ರ ಸಂಗ್ಮಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT