ಶ್ರೀನಗರ: ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ ಬಳಿ ಗಡಿ ನುಸುಳಲು ಯತ್ನಿಸುತ್ತಿದ್ದ ಉಗ್ರಗಾಮಿಗಳು ಮತ್ತು ಯೋಧರ ನಡುವೆ ಬುಧವಾರ ಬೆಳಗ್ಗೆ ಭಾರೀ ಗುಂಡಿನ ಕಾಳಗ ನಡೆದು ಓರ್ವ ಯೋಧ ಹುತಾತ್ಮನಾಗಿದ್ದಾನೆ.ಉಗ್ರ ಕೂಡ ಗುಂಡಿಗೆ ಬಲಿಯಾಗಿದ್ದಾನೆ. ಐವರು ಯೋಧರು ಗಾಯಗೊಂಡಿದ್ದರು. ಕಾಳಗ ನಿನ್ನೆಯಿಂದಲೇ ಆರಂಭಗೊಂಡಿತ್ತು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳ ಪೈಕಿ ಇಬ್ಬರು ಯೋಧರ ಸ್ಥಿತಿ ಚಿಂತಾಜನಕವಾಗಿದ್ದು ಅವರಿಗೆ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಇನ್ನೂ ದಾಳಿ ಮುಂದುವರಿಯುತ್ತಿದೆ.