ಶೀಲಾ ದೀಕ್ಷಿತ್ 
ದೇಶ

ಕಮಲ್ ನಾಥ್ ರಾಜೀನಾಮೆ: ಪಂಜಾಬ್ ಕಾಂಗ್ರೆಸ್ ಉಸ್ತುವಾರಿಯಾಗಿ ಶೀಲಾ ದೀಕ್ಷಿತ್ ನೇಮಕ ಸಾಧ್ಯತೆ

ಪಂಜಾಬ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಮಲ್ ನಾಥ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಚಂಡೀಗಢ: ಪಂಜಾಬ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಕಮಲ್ ನಾಥ್ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿ ಮಾಜಿ ಸಿಎಂ ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡುವ ಸಾಧ್ಯತೆ ಇದೆ.

ಶೀಲಾ ದೀಕ್ಷಿತ್ ಅವರನ್ನು ಪಂಜಾಬ್ ನ ಉಸ್ತುವಾರಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಂಗ್ರೆಸ್ ಈ ವರೆಗೂ ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಶೀಲಾ ದೀಕ್ಷಿತ್ ದೆಹಲಿ ಸಿಎಂ ಆಗಿದ್ದರಾದರೂ ಅವರು ಹುಟ್ಟಿದ್ದು ಪಂಜಾಬ್ ನಲ್ಲಿ. ದೆಹಲಿ ಸಿಎಂ ಸ್ಥಾನ ಕಳೆದುಕೊಂಡ ನಂತರ ಅಂದಿನ ಯುಪಿಎ ಸರ್ಕಾರ ಶೀಲಾ ದೀಕ್ಷಿತ್ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು.   ತಾವು ಪಂಜಾಬ್ ಉಸ್ತುವಾರಿಯಾದ ನಂತರ ಸಿಖ್-ವಿರೋಧಿ ಹತ್ಯಾಕಾಂಡವನ್ನು ಮುಂದಿಟ್ಟುಕೊಂಡು ಅನಾವಶ್ಯಕ ವಿವಾದ ಉಂಟುಮಾಡಲಾಗುತ್ತಿದೆ ಎಂದು ಕಾರಣ ನೀಡಿ ಕಮಲ್ ನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಿಖ್ ವಿರೋಧಿ ದಂಗೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಕಮಲ್ ನಾಥ್ ಅವರನ್ನು ಪಂಜಾಬ್ ಕಾಂಗ್ರೆಸ್ ನ ಉಸ್ತುವಾರಿಯನ್ನಾಗಿ ನೇಮಿಸಿದ್ದಕ್ಕೆ ಆಮ್ ಆದ್ಮಿ ಪಕ್ಷ, ಅಕಾಲಿದಳ ಮಾತ್ರವಷ್ಟೇ ಅಲ್ಲದೇ ಕಾಂಗ್ರೆಸ್ ನಲ್ಲಿಯೂ ಹಲವರು ವಿರೋಧಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಹೆಬ್ಬಾಳ ಕಿರು ಸುರಂಗ ಯೋಜನೆ "ಅವೈಜ್ಞಾನಿಕ": 1,350 ಕೋಟಿ ರೂ. ಸಾರ್ವಜನಿಕ ಹಣ ಪೋಲು: ಸಂಸದ ತೇಜಸ್ವಿ ಸೂರ್ಯ ಆಕ್ಷೇಪ

ನಾನೀಗ DCM, ಡಿಕೆ.ಶಿವಕುಮಾರ್ CM, ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ. ಜಿ. ಪರಮೇಶ್ವರ್

ಶಕ್ತಿ, ಜ್ಞಾನ, ಸಂಸ್ಕೃತಿ, ಸಮಾನತೆಯ ಸಂಗಮ ಮೈಸೂರು ದಸರಾ: ಸಿಎಂ ಡಿಕೆ ಶಿವಕುಮಾರ್