ಚಿದಂಬರಂ 
ದೇಶ

ಇಶ್ರತ್ ಜಹಾನ್ ಪ್ರಕರಣ: ಚಿದಂಬರಂರಿಂದ ಕೇಂದ್ರದ ವಿರುದ್ಧ 'ನಕಲಿ ವಿವಾದ ಸೃಷ್ಟಿ' ಆರೋಪ

ಇಶ್ರಾತ್ ಜಹಾನ್ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಕಲಿ ವಿವಾದ ಸೃಷ್ಟಿಸಿರುವ ಆರೋಪ ಮಾಡಿದ್ದಾರೆ.

ನವದೆಹಲಿ: ಇಶ್ರಾತ್ ಜಹಾನ್ ಪ್ರಕರಣ ಮತ್ತೆ ಸುದ್ದಿಯಲ್ಲಿದ್ದು ಮಾಜಿ ಕೇಂದ್ರ ಗೃಹ ಸಚಿವ, ಕಾಂಗ್ರೆಸ್ ನಾಯಕ ಪಿ ಚಿದಂಬರಂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ನಕಲಿ ವಿವಾದ ಸೃಷ್ಟಿಸಿರುವ ಆರೋಪ ಮಾಡಿದ್ದಾರೆ.

ಇಶ್ರಾತ್ ಜಹಾನ್ ಪ್ರಕರಣದಲ್ಲಿ ವಿವಾದಕ್ಕೀಡಾಗಿದ್ದ ಎರಡು ಅಫಿಡವಿಟ್ ಗೆ ಸಂಬಂಧಿಸಿದಂತೆ ಪಿ ಚಿದಂಬರಂ, ಮೋದಿ ಸರ್ಕಾರ ವಿರುದ್ಧ ಆರೋಪ ಮಾಡಿದ್ದು, ಮಾಧ್ಯಮವರದಿಯೊಂದು ಮೋದಿ ಸರ್ಕಾರ ರೂಪಿಸಿದ್ದ ನಕಲಿ ವಿವಾದವನ್ನು ಸ್ಪಷ್ಟವಾಗಿ ಬಯಲಿಗೆಳೆದಿದೆ ಎಂದು ಹೇಳಿದ್ದಾರೆ. ನಾಪತ್ತೆಯಾಗಿರುವ ಇಶ್ರಾತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ಪತ್ತೆ ಮಾಡಲು ರಚಿಸಲಾಗಿದ್ದ ಸಮಿತಿ ಸಾಕ್ಷಿಯಾಗಿದ್ದ ವ್ಯಕ್ತಿಯನ್ನು ಹಿಂಸಿಸಿದೆ ಎಂಬ ವರದಿ ಪ್ರಕಟವಾದ ಬೆನ್ನಲ್ಲೇ ಚಿದಂಬರಂ ಈ ಆರೋಪ ಮಾಡಿದ್ದಾರೆ.

ತಿರುಚಿದ ವರದಿ ಸಹ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ ಎಂಬುದು ಈ ವರದಿಯಿಂದ ಸ್ಪಷ್ಟವಾಗಿದೆ. ಇಶ್ರಾತ್ ಜಹಾನ್ ಹಾಗೂ ಇನ್ನೂ ಮೂವರನ್ನು ನ್ಯಾಯಸಮ್ಮತವಾದ ಎನ್ ಕೌಂಟರ್ ಮೂಲಕ ಹತ್ಯೆ ಮಾಡಲಾಯಿತೋ ಇಲ್ಲವೋ ಎಂಬುದು ಪ್ರಮುಖ ವಿಷಯವಾಗಿದ್ದು 2013 ರ ಜುಲೈ ನಿಂದ ಬಾಕಿ ಇರುವ ಪ್ರಕರಣದ ವಿಚಾರಣೆಯಿಂದ ನಕಲಿ ಎನ್ ಕೌಂಟರ್ ಹೌದೋ ಅಲ್ಲವೋ ಎಂಬ ಬಗ್ಗೆ ಸತ್ಯ ಹೊರಬೀಳಲಿದೆ ಎಂದು ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ.  ಇಶ್ರಾತ್ ಜಹಾನ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿರುವ ಬಗ್ಗೆ ವರದಿ ಸಲ್ಲಿಸಿದ್ದ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಬಿಕೆ ಪ್ರಸಾದ್ ನಾಪತ್ತೆಯಾಗಿರುವ 5 ಕಡತಗಳ ಪೈಕಿ 4 ಕಡತಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ತಿಳಿಸಿದ್ದರು. 
ಯುಪಿಎ ಸರ್ಕಾರದ ಅವಧಿಯಲ್ಲಿ ಸಲ್ಲಿಸಲಾಗಿದ್ದ ಎರಡು ಅಫಿಡವಿಟ್ ಗಳು ಇದಕ್ಕೂ ಮುನ್ನ ವಿವಾದಕ್ಕೀಡಾಗಿತ್ತು. ಎರಡನೇ ಅಫಿಡವಿಟ್ ನನ್ನು ಚಿದಂಬರಂ ನಿರ್ದೇಶನದಲ್ಲಿ ಸಿದ್ಧಪಡಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಆದರೆ ಈ ಆರೋಪವನ್ನು ಅಲ್ಲಗಳೆದಿರುವ ಚಿದಂಬರಂ, ಮೊದಲನೇ ಅಫಿಡವಿಟ್ ನ್ನು ಮಾಧ್ಯಮಗಳು ಸಂಪೂರ್ಣವಾಗಿ ತಪ್ಪಾಗಿ ಅರ್ಥೈಸಿದ್ದವು, ಆದ್ದರಿಂದ ಮೊದಲನೇ ಅಫಿಡವಿಟ್ ಬಗ್ಗೆ ಸ್ಪಷ್ಟನೆ ನೀಡುವುದು ಅಗತ್ಯವಾಗಿತ್ತು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT