ಕಾಂಗ್ರೆಸ್ ಮುಖಂಡ ಕಮಲ್ ನಾಥ್ 
ದೇಶ

ಪಂಜಾಬ್ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸ್ಥಾನ ತ್ಯಜಿಸಿದ ಕಮಲ್ ನಾಥ್

1984ರ ಸಿಖ್ ದಂಗೆ ಪ್ರಕರಣದಲ್ಲಿ ತಮ್ಮ ಪಾತ್ರವಿರುವ ಆರೋಪ ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಅವರನ್ನು...

ನವದೆಹಲಿ: 1984ರ ಸಿಖ್ ದಂಗೆ ಪ್ರಕರಣದಲ್ಲಿ ತಮ್ಮ ಪಾತ್ರವಿರುವ ಆರೋಪ ಕಾಂಗ್ರೆಸ್ ಹಿರಿಯ ನಾಯಕ ಕಮಲ್ ನಾಥ್ ಅವರನ್ನು ಕಾಡುತ್ತಿರುವುದರಿಂದ ಪಂಜಾಬ್ ರಾಜ್ಯದ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಬಿಟ್ಟುಕೊಟ್ಟಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆ ಮುಂದಿನ ವರ್ಷ ನಡೆಯಲಿದ್ದು, ಈ ಸಂದರ್ಭದಲ್ಲಿ ರಾಜ್ಯದ ಪಕ್ಷದ ಉಸ್ತುವಾರಿ ವಹಿಸಿ ಮೂರು ದಿನಗಳ ಹಿಂದೆ ಕಾಂಗ್ರೆಸ್ ಹೈಕಮಾಂಡ್ ಆದೇಶ ಹೊರಡಿಸಿತ್ತು. ಸಿಖ್ ವಿರೋಧಿ ದಂಗೆ ವಿಷಯವನ್ನು ವಿರೋಧ ಪಕ್ಷಗಳು ಚುನಾವಣೆ ಸಂದರ್ಭದಲ್ಲಿ ಎತ್ತುವ ಸಾಧ್ಯತೆಯಿರುವುದರಿಂದ ಆಗಿರುವ ಹಾನಿಯನ್ನು ನಿಯಂತ್ರಿಸಲು ಕಮಲ್ ನಾಥ್ ತಮ್ಮ ಹೊಣೆಗಾರಿಕೆಯನ್ನು ಬಿಟ್ಟುಕೊಟ್ಟಿದ್ದಾರೆ ಎನ್ನಲಾಗಿದೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದು, ಕೂಡಲೇ ಅವರು ಕಮಲ್ ನಾಥ್ ಅವರ ರಾಜೀನಾಮೆ ಪತ್ರವನ್ನು ಸ್ವೀಕರಿಸಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತಿ ಕೊಡಿಸಿದ್ದಾರೆ.

ಕಮಲ್ ನಾಥ್ ಅವರಿಗೆ ಕಳೆದ ಭಾನುವಾರ ಪಂಜಾಬ್ ಮತ್ತು ಹರ್ಯಾಣ ರಾಜ್ಯಗಳ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ನೀಡಲಾಗಿತ್ತು. ಪಂಜಾಬ್ ರಾಜ್ಯ ಚುನಾವಣೆ ಸಮಯದಲ್ಲಿ ಅಲ್ಲಿನ ನಿಜವಾದ ಸಮಸ್ಯೆಗಳು ಮತ್ತು ಅಲ್ಲಿ ಆಗಬೇಕಾದ ಕೆಲಸಗಳಿಗಿಂತ ಬೇರೆ ಕಡೆ ಜನರ ಮನಸ್ಸು ವಿಚಲಿತವಾಗುವುದು ಬೇಡ ಎಂದು ನಾನು ಸ್ಥಾನವನ್ನು ತ್ಯಜಿಸುತ್ತಿದ್ದೇನೆ. 1984ರ ದೆಹಲಿಯ ಸಿಖ್ ವಿರೋಧಿ ದಂಗೆ ವಿಚಾರದಲ್ಲಿ ಅನಗತ್ಯ ವಿವಾದ ಸೃಷ್ಟಿಸಲಾಗಿದೆ ಎಂದು ಮಾಜಿ ಕೇಂದ್ರ ಸಚಿವ ಕಮಲ್ ನಾಥ್ ಸೋನಿಯಾ ಗಾಂಧಿಯವರಿಗೆ ಬರೆದ ಪತ್ರದಲ್ಲಿ ವಿವರಿಸಿದ್ದಾರೆ.

1984ರ ಸಿಖ್ ವಿರೋಧಿ ದಂಗೆಯಲ್ಲಿ ಕಮಲ್ ನಾಥ್ ಪಾತ್ರವಿತ್ತು ಎಂದು ಪಂಜಾಬ್ ನಲ್ಲಿ ಅಕಾಲಿದಳ, ಬಿಜೆಪಿ ಮತ್ತು ಆಪ್ ಪಕ್ಷಗಳು ವಾಗ್ದಾಳಿ ಆರಂಭಿಸಿದ್ದ ಹಿನ್ನೆಲೆಯಲ್ಲಿ ಕಮಲ್ ನಾಥ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!