ದೇಶ

ಇಶ್ರತ್ ಜಹಾನ್ ಪ್ರಕರಣದ ಕಡತಗಳ ನಾಶ ರಾಷ್ಟ್ರವಿರೋಧಿ ಚಟುವಟಿಕೆಗೆ ಸಮವಾದದ್ದು: ಮುಕ್ತಾರ್ ಅಬ್ಬಾಸ್ ನಖ್ವಿ

Srinivas Rao BV

ನವದೆಹಲಿ: ಇಶ್ರತ್ ಜಹಾನ್ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳನ್ನು ನಾಪತ್ತೆ ಮಾಡಿರುವುದು ರಾಷ್ಟ್ರ ವಿರೋಧಿ ಚಟುವಟಿಕೆಗೆ ಸಮನಾಗುತ್ತದೆ ಎಂದು ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ಕಡತಗಳ ನಾಪತ್ತೆ ಮಾಡಿದ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿರುವ ಮುಕ್ತಾರ್ ಅಬ್ಬಾಸ್ ನಖ್ವಿ, ನಾಪತ್ತೆಯಾಗಿರುವ ಕಡತಗಳನ್ನು ಪತ್ತೆ ಮಾಡಲಾಗುತ್ತಿದೆ. ಕಡತಗಳನ್ನು ನಾಪತ್ತೆಯಾಗುವಂತೆ ಮಾಡಿರುವುದು ಕ್ರಿಮಿನಲ್ ಅಪರಾಧ ಹಾಗೂ ರಾಷ್ಟ್ರ ವಿರೋಧಿ ಚಟುವಟಿಕೆಯಾಗುತ್ತದೆ. ಇಶ್ರತ್ ಜಹಾನ್ ಳ ಉಗ್ರ ಹಿನ್ನೆಲೆಯನ್ನು ಮರೆಮಾಚಲು ಎರಡನೇ ಅಫಿಡವಿಟ್ ನ್ನು ಅಂದಿನ ಗೃಹ ಸಚಿವ ಪಿ ಚಿದಂಬರಂ ನಿರ್ದೇಶನದಲ್ಲಿ ತಯಾರಿಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಇಶ್ರತ್ ಜಹಾನ್ ಳ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದ ಕಡತಗಳು ನಾಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸುತ್ತಿರುವ ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಬಿಕೆ ಪ್ರಸಾದ್ ನಾಪತ್ತೆಯಾಗಿರುವ 5 ಕಡತಗಳ ಪೈಕಿ 4 ಕಡತಗಳು ಇನ್ನೂ ಪತ್ತೆಯಾಗಿಲ್ಲ ಎಂದು ಗೃಹ ಸಚಿವರಿಗೆ ಸಲ್ಲಿಸಿದ್ದ  ವರದಿಯಲ್ಲಿ ತಿಳಿಸಿದ್ದರು.  

SCROLL FOR NEXT