ನವದೆಹಲಿ: ಮುಂಬರುವ ಉತ್ತರ ವಿಧಾನಸಭೆ ಚುನಾವಣೆಯಲ್ಲಿ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದ ಶೀಲಾ ದಿಕ್ಷಿತ್ ಅವರನ್ನು ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಾಂಗ್ರೆಸ್ ಹೈಕಮಾಂಡ್ ಶೀಲಾ ದಿಕ್ಷಿತ್ ಅವರ ಹೆಸರನ್ನು ಶಿಫಾರಸು ಮಾಡಿರುವ ಉತ್ತರ ಪ್ರದೇಶ ಚುನಾವಣೆ ತಂತ್ರಗಾರ ಪ್ರಶಾಂತ್ ಕಿಶೋರ್ ಅವರು, ಮುಂದಿನ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ಶೀಲಾ ದಿಕ್ಷಿತ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶೀಲಾ ದಿಕ್ಷಿತ್ ಪ್ರಮುಖ ಬ್ರಾಹ್ಮಣ ಸಮುದಾಯಕ್ಕೆ ಸೇರಿರುವುದರಿಂದ ಆ ಸಮುದಾಯದ ಮತಗಳನ್ನು ಪಕ್ಷಕ್ಕೆ ಸೆಳೆಯಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಮಂದಿರ-ಮಂಡಲ್ ರಾಜಕೀಯದಿಂದಾಗಿ ಇತ್ತೀಚಿಗ ಬ್ರಾಹ್ಮಣರ ಮತಗಳು ಬಿಜೆಪಿಗೆ ಶಿಫ್ಟ್ ಆಗಿದ್ದು, ಆ ಮತಗಳನ್ನು ಸೆಳೆಯಲು ಶೀಲಾ ದಿಕ್ಷಿತ್ ಬೇಕು ಎಂದು ಪ್ರಶಾಂತ್ ಕಿಶೋರ್ ಸಲಹೆ ನೀಡಿದ್ದಾರೆ.
78 ವರ್ಷದ ಶೀಲಾ ದಿಕ್ಷಿತ್ ಅವರು 1999ರಿಂದ 2014ರವರೆಗೆ ಸತತ ಮೂರು ಬಾರಿ ದೆಹಲಿ ಮುಖ್ಯಮಂತ್ರಿಯಾಗಿದ್ದರು.