ಉತ್ತರ ಪ್ರದೇಶ : ಕೈ ಹಿಡಿದ ಹೆಂಡತಿಯನ್ನು ಮನೆಗೆ ಕರೆಸಿಕೊಳ್ಳದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವ ಯಾವ ಅಧಿಕಾರವಿದೆ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಪ್ರಶ್ನಿಸಿದ್ದಾರೆ.
ಟೀವಿ ಚಾನಲ್ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿರುವ ಅಜಂ ಖಾನ್ ನರೇಂದ್ರ ಮೋದಿ ಅವರು ತಮ್ಮ ತಾಯಿಯನ್ನು ಮನೆಗೆ ಕರೆಸಿಕೊಂಡಿದ್ದಾರೆ; ಆದರೆ ಪತ್ನಿಯನ್ನು ಮನೆಗೆ ಕರೆಸಿಕೊಂಡಿಲ್ಲ; ಆಕೆಗೆ ಕೊಡಬೇಕಾದ ಗೌರವವನ್ನು ಕೊಟ್ಟಿಲ್ಲ. ಇದು ಸರಿಯಲ್ಲ, ಮೋದಿ ಅವರು ಪತ್ನಿಯನ್ನು ಮನೆಗೆ ಕರೆಸಿಕೊಂಡರೇ ನಾವು ಅವರಿಗೆ ಕೃತಜ್ಞರಾಗಿರುತ್ತೇವೆ ಎಂದು ಹೇಳಿದ್ದಾರೆ.
"ಪ್ರಧಾನಿ ಮೋದಿ ಅವರು ದೇಶದ ಅಲ್ಪಸಂಖ್ಯಾತ ಸಮುದಾಯದವರನ್ನು ಪಾಕಿಸ್ತಾನಕ್ಕೆ ಕಳುಹಿಸುವುದಾಗಿ ಹೇಳುತ್ತಾರೆ, ಯಾರಿಗೂ ಮಾಹಿತಿ ನೀಡದೆ ಸ್ವತಃ ಇಸ್ಲಾಮಿಕ್ ದೇಶಕ್ಕೆ ಹೋಗುತ್ತಾರೆ, ಪಾಕ್ ಪ್ರಧಾನಿಯ ನವಾಜ್ ಷರೀಫ್ ತಾಯಿಯ ಕಾಲಿಗೆ ಬಿದ್ದು ನಮಸ್ಕರಿಸುತ್ತಾರೆ. ಮುಚ್ಚಿದ ಕೋಣೆಯಲ್ಲಿ ದೇಶ ದ್ರೋಹಿಗಳಿಗೆ ಹಸ್ತ ಲಾಘವ ನೀಡುತ್ತಾರೆ' ಎಂದು ಆಜಂ ಖಾನ್ ಟೀಕಿಸಿದ್ದಾರೆ.
ಬಿಜೆಪಿಗೆ ಉತ್ತರ ಪ್ರದೇಶದಲ್ಲಿ ಗುಜರಾತ್‌ನಂತೆ ಭಾರೀ ದೊಡ್ಡ ದೊಂಬಿ ನಡೆಯಬೇಕೆಂಬ ಇಚ್ಛೆ ಇದೆ. ಆರ್‌ಎಸ್‌ಎಸ್ ಕುಮ್ಮಕ್ಕಿನಲ್ಲಿ ಬಿಜೆಪಿಯು ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಭಾರೀ ದೊಡ್ಡ ದಂಗೆ, ದೊಂಬಿ ನಡೆಸುವ ಸಂಚು ರೂಪಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.