ಜಮ್ಮುವಿನಲ್ಲಿ ಮುಂದುವರಿದ ಗುಂಡಿನ ದಾಳಿ: ಓರ್ವ ಉಗ್ರ ಸಾವು
ಜಮ್ಮು-ಕಾಶ್ಮೀರದ ಸಪೋರಾ ಪ್ರದೇಶದಲ್ಲಿ ಭದ್ರತಾ ಯೋಧರು ಮತ್ತು ಉಗ್ರಗಾಮಿಗಳ ನಡುವಿನ...
ಶ್ರೀನಗರ: ಜಮ್ಮು-ಕಾಶ್ಮೀರದ ಸಪೋರಾ ಪ್ರದೇಶದಲ್ಲಿ ಭದ್ರತಾ ಯೋಧರು ಮತ್ತು ಉಗ್ರಗಾಮಿಗಳ ನಡುವಿನ ದಾಳಿ ಮುಂದುವರಿದಿದ್ದು, ಶುಕ್ರವಾರ ಬೆಳಗ್ಗೆ ಮನೆಯೊಳಗೆ ಸೇರಿಕೊಂಡಿದ್ದ ಭಯೋತ್ಪಾದಕನನ್ನು ಕೊಂದುಹಾಕುವಲ್ಲಿ ಯೋಧರು ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ತಪ್ಪಿಸಿಕೊಂಡಿದ್ದಾನೆ ಎಂದು ಮಾಧ್ಯಮ ವರದಿ ತಿಳಿಸಿದೆ.
ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಒಳನುಸುಳಲು ಯತ್ನಿಸಿದಾಗ ಯೋಧರು ನಾಲ್ವರು ಉಗ್ರಗಾಮಿಗಳನ್ನು ಕೊಂದುಹಾಕಿದ್ದಾರೆ.
ಕಾಶ್ಮೀರದ ತಂಗ್ದಾರ್ ವಲಯದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಿನ್ನೆ ಸೈನಿಕರೊಬ್ಬರು ಸಾವನ್ನಪ್ಪಿದ್ದಾರೆ. ಉಗ್ರರು ಭಾರತದ ಪ್ರಾಂತ್ಯದೊಳಗೆ ಪ್ರವೇಶಿಸಲು ಯತ್ನಿಸುತ್ತಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.