ದೇಶ

ಸೊಪೋರ್ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

Lingaraj Badiger
ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಗರದಲ್ಲಿ ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಮನೆಯಲ್ಲಿ ಅಡಗಿ ಕುಳಿತಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಶುಕ್ರವಾರ ಹೊಡೆದುರಿಳಿಸಿದ್ದಾರೆ.
ಉಗ್ರರ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ಇಂದು ಬೆಳಗ್ಗೆ ಸೊಪೋರ್ ನ ಬೊಮೈ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದೆರಡು ದಿನಗಳಿಂದ ಜಮ್ಮು ಕಾಶ್ಮೀರದ ಗಡಿಯಲ್ಲಿ ಕಾರ್ಯಾಚರಣೆ ನಿರಂತರವಾಗಿ ನಡೆಯುತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಲಾಗಿತ್ತು. ಉಗ್ರರ ಉಪಟಳದ ವಿರುದ್ಧ ಹೋರಾಟಕ್ಕಿಳಿದ ಯೋಧರ ಪೈಕಿ ಇಬ್ಬರು ಗುಂಡೇಟಿನಿಂದ ಗಾಯಗೊಂಡಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಿಎಸ್​ಎಫ್ ಅಧಿಕಾರಿಗಳು ನೀಡಿರುವ ಮಾಹಿತಿಯಂತೆ ಇನ್ನಷ್ಟು ಮಂದಿ ಉಗ್ರರು ಗಡಿಯಲ್ಲಿ ಒಳನುಸುಳಿ ಬಂದಿರಬಹುದಾದ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ.
SCROLL FOR NEXT