ಬಿಎಸ್ಪಿ ಶಾಸಕನ ಮಿಲ್ ನಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ, ಹತ್ಯೆ
ಬಿಎಸ್ಪಿ ಶಾಸಕರೊಬ್ಬರ ಮಾಲೀಕತ್ವದ ಪೇಪರ್ ಮಿಲ್ ನಲ್ಲಿ 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು...
ಮುಜಾಫರನಗರ: ಬಿಎಸ್ಪಿ ಶಾಸಕರೊಬ್ಬರ ಮಾಲೀಕತ್ವದ ಪೇಪರ್ ಮಿಲ್ ನಲ್ಲಿ 38 ವರ್ಷದ ದಲಿತ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಜನಸತ್ ರಸ್ತೆಯಲ್ಲಿರುವ ಶಾಸಕರ ಮಿಲ್ ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆಯನ್ನು ಹತ್ಯೆ ಮಾಡುವುದಕ್ಕು ಮುನ್ನ ಆಕೆ ಮೇಲೆ ಅತ್ಯಾಚಾರ ಎಸಗಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು, ಪ್ರಕರಣ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಯ ನಂತರ ಲೇಬರ್ ಕಾಂಟ್ರ್ಯಾಕ್ಟರ್ ಖುರ್ಷಿದ್ ನಾಪತ್ತೆಯಾಗಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.