ದ ಕಂಜ್ಯೂರಿಂಗ್ 2 ಹಾರರ್ ಸಿನಿಮಾ ನೋಡುತ್ತಿದ್ದ ವ್ಯಕ್ತಿ ಚಿತ್ರಮಂದಿರದಲ್ಲೇ ಸಾವು
ಇತ್ತೀಚೆಗೆ ಬಿಡುಗಡೆಯಾದ ‘ದ ಕಂಜ್ಯೂರಿಂಗ್ 2’ ಹಾರರ್ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುತ್ತಿದ್ದ ವೇಳೆ 65 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ..
ಹೈದರಾಬಾದ್: ಇತ್ತೀಚೆಗೆ ಬಿಡುಗಡೆಯಾದ ‘ದ ಕಂಜ್ಯೂರಿಂಗ್ 2’ ಹಾರರ್ ಸಿನಿಮಾವನ್ನು ಚಿತ್ರಮಂದಿರದಲ್ಲಿ ನೋಡುತ್ತಿದ್ದ ವೇಳೆ 65 ವರ್ಷದ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ತಿರುವಣ್ಣಾಮಲೈನಲ್ಲಿ ನಡೆದಿದೆ.
ಆಂಧ್ರಪ್ರದೇಶ ಮೂಲದ ಇಬ್ಬರು ವ್ಯಕ್ತಿಗಳು ಬಾಲಸುಬ್ರಮಣಿಯನ್ ಸಿನಿಮಾಸ್ ಥಿಯೇಟರ್ನಲ್ಲಿ ಇಂಗ್ಲಿಷ್ ಸಿನಿಮಾ ‘ದ ಕಂಜ್ಯೂರಿಂಗ್ 2’ ನೋಡಲು ತೆರಳಿದ್ದರು. ಚಿತ್ರದ ಅಂತ್ಯದಲ್ಲಿ ಕಾಣಿಸಿಕೊಂಡ ಭಯಾನಕ ದೃಶ್ಯಕ್ಕೆ ಬೆದರಿದ ವ್ಯಕ್ತಿ ಅಲ್ಲಿಯೇ ಕೊನೆಯುಸಿರೆಳೆದಿದ್ದಾನೆ.
ಎದೆನೋವಿನಿಂದ ಕುಸಿದುಬಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲು ಆಂಬುಲೆನ್ಸ್ ಗೆ ಕರೆ ಮಾಡಲಾಯಿತು, ಆಂಬುಲೆನ್ಸ್ ಬರುವ ವೇಳೆಗೆ ಆತ ಮೃತಪಟ್ಟಿದ್ದ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.