ನವದೆಹಲಿ: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ತಮ್ಮ 46ನೇ ಹುಟ್ಟುಹಬ್ಬ ಆಚರಣೆಯನ್ನು ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಹುಲ್ ಗೆ ಶುಭ ಹಾರೈಸಿದ್ದಾರೆ.
ಟ್ವಿಟರ್ ನಲ್ಲಿ ಶುಭಾಶಯ ಕೋರಿರುವ ಪ್ರಧಾನ ಮೋದಿಯವರು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು, ಧೀರ್ಘಕಾಲಿ ಜೀವನ ಮತ್ತು ಆರೋಗ್ಯ ಭಾಗ್ಯ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ.
ರಾಹುಲ್ ಹುಟ್ಟುಹಬ್ಬದ ಆಚರಣೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲಿ ಹರ್ಷವನ್ನುಂಟು ಮಾಡಿದ್ದು, ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆಂದು ಹೇಳಲಾಗುತ್ತಿದೆ.