ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಸಮಸ್ಯೆ ಬಗೆಹರಿಕೆಗೆ ಒತ್ತಡ: ನೊಂದ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಗೆ ಶರಣು

ಗೆಳೆಯನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯೊಬ್ಬಳಿಗೆ ನ್ಯಾಯಾಲಯದ ಹೊರಗೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಒತ್ತಡ ಹೇರಿದ್ದಕ್ಕೆ ನೊಂದ ಅತ್ಯಾಚಾರ ಸಂತ್ರಸ್ತೆ...

ಸಾಂದರ್ಭಿಕ ಚಿತ್ರ
Manjula VN
Updated On : 21 Jun 2016, 12:56 pm

ನವದೆಹಲಿ: ಗೆಳೆಯನಿಂದಲೇ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯೊಬ್ಬಳಿಗೆ ನ್ಯಾಯಾಲಯದ ಹೊರಗೆ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವಂತೆ ಒತ್ತಡ ಹೇರಿದ್ದಕ್ಕೆ ನೊಂದ ಅತ್ಯಾಚಾರ ಸಂತ್ರಸ್ತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆಯೊಂದು ಪೂರ್ವ ದೆಹಲಿಯ ಹಾರ್ಶ್ ವಿಹರ್ ಪ್ರದೇಶದಲ್ಲಿ ನಡೆದಿದೆ.

ಮದುವೆಯಾಗುವುದಾಗಿ ನಂಬಿಸಿ ಯುವತಿಯೊಬ್ಬಳ ಮೇಲೆ ಆತನ ಗೆಳಯನೊಬ್ಬ ಅತ್ಯಾಚಾರ ನಡೆಸಿದ್ದ. ಮೇ ತಿಂಗಳಿನಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನಂತೆ ಪೊಲೀಸರು ಯುವಕನನ್ನು ಬಂಧನಕ್ಕೊಳಪಡಿಸಿದ್ದರು.

ಪ್ರಕರಣ ನ್ಯಾಯಾಲಯದ ಮೆಟ್ಟಿಲು ಹತ್ತುತ್ತಿದ್ದಂತೆ ನ್ಯಾಯಾಲಯದ ಹೊರಗೆ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಯುವಕನ ಕುಟುಂಬಸ್ಥರು ಯುವತಿಯ ಕುಟುಂಬಸ್ಥರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ಇದರಿಂದ ನೊಂದ ಯುವತಿ ತನ್ನ ಮನೆಯಲ್ಲೇ ನೇಣು ಬಿಗುದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಯುವತಿ ಡೆತ್ ನೋಟ್ ವೊಂದನ್ನು ಬರೆದಿದ್ದು, ಪತ್ರದಲ್ಲಿ, ಅವಮಾನ ಹಾಗೂ ನಾಚಿಕೆಯಿಂದಾಗಿ ನಾನು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ. ಅತ್ಯಾಚಾರ ಮಾಡಿದ ಗೆಳೆಯನ ಕುಟುಂಬಸ್ಥರು ಪ್ರಕರಣವನ್ನು ನ್ಯಾಯಾಲಯದ ಹೊರತಾಗಿ ಇತ್ಯರ್ಥಪಡಿಸಿಕೊಳ್ಳುವಂತೆ ನನ್ನ ಕುಟುಂಬ ಸದಸ್ಯರ ಮೇಲೆ ಒತ್ತಡ ಹೇರಲು ಆರಂಭಿಸಿದ್ದಾರೆ. ನಾನು ಪ್ರೀತಿಸಿದ ವ್ಯಕ್ತಿಯೇ ನನಗೆ ಮೋಸ ಮಾಡಿದ್ದ. ಇಷ್ಟೆಲ್ಲಾ ಆದರೂ, ನನ್ನ ಕುಟುಂಬಸ್ಥರು ನನಗೆ ಬೆಂಬಲವಾಗಿ ನಿಂತಿದ್ದರು. ಆದರೆ, ಇದೀಗ ಅವರೇ ನನ್ನ ವಿರುದ್ಧ ಆಕ್ಷೇಪಣೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಇದರಿಂದ ನೊಂದು ನಾನು ಆತ್ಮಹತ್ಯೆ ಶರಣಾಗುತ್ತಿದ್ದೇನೆಂದು ಹೇಳಿಕೊಂಡಿದ್ದಾಳೆ.

ಇದೀಗ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಯುವತಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement