ರಾಷ್ಟ್ರಪತಿ ಪ್ರಣಬ್ ಮುಖರ್ಜಿ 
ದೇಶ

ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ: ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಾತನಾಡಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಿಕೊಳ್ಳಿ ಎಂದು ಕರೆ ನೀಡಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ಎರಡನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನವನ್ನು ಉದ್ಘಾಟಿಸಿ, ಸುಮಾರು 1,000 ಜನರೊಂದಿಗೆ ಯೋಗಭ್ಯಾಸ ಮಾಡಿದ ಪ್ರಣಬ್ ಮುಖರ್ಜಿ, ಯೋಗದಿಂದ  ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದ್ದಾರೆ.

ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯವಾಗುತ್ತದೆ. ಆದ್ದರಿಂದ ಯೋಗವನ್ನು ಜೀವನದ ಅವಿಭಾಜ್ಯ ಅಂಗವಾಗಿಸಬೇಕು.  ಮನಸ್ಸು ಹಾಗೂ ದೇಹದ ಸ್ವಾಸ್ಥ್ಯಕ್ಕೆ ಯೋಗ ಪರಿಣಾಮಕಾರಿಯಾಗಿದ್ದು, ಪ್ರತಿಯೊಬ್ಬರೂ ಯೋಗಾಭ್ಯಾಸ ಮಾಡಬೇಕು ಎಂದು ಪ್ರಣಬ್ ಮುಖರ್ಜಿ ಕರೆ ನೀಡಿದ್ದಾರೆ.

ಜೂ.21 ರಂದು ವಿಶ್ವಾದ್ಯಂತ ಯೋಗದಿನಾಚರಣೆ ನಡೆಯುತ್ತಿದ್ದು, ಚಂಡೀಘಡದ ಕ್ಯಾಪಿಟಲ್ ಕಾಂಪ್ಲೆಕ್ಸ್ ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದ ಜನಸ್ತೋಮದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಯೋಗಾಭ್ಯಾಸ ಮಾಡುವ ಮೂಲಕ 2ನೇ ಅಂತಾರಾಷ್ಟ್ರೀಯ  ಯೋಗ ದಿನಾಚರಣೆಗೆ ಚಾಲನೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!