ದೇಶ

ಚೆನ್ನೈ: ಹಾಡು ಹಗಲೆ ರೈಲ್ವೆ ನಿಲ್ದಾಣದಲ್ಲಿ ಇನ್ಫೋಸಿಸ್ ಉದ್ಯೋಗಿ ಭೀಕರ ಕೊಲೆ

Vishwanath S

ಚೆನ್ನೈ: ನುನ್ಗಾಬಾಕ್ಕಂ ರೈಲ್ವೇ ನಿಲ್ದಾಣದಲ್ಲಿ ಹಾಡು ಹಗಲೆ ಇನ್ಫೋಸಿಸ್ ಉದ್ಯೋಗಿಯನ್ನು ದುಷ್ಕರ್ಮಿಯೊಬ್ಬ ಚಾಕುವಿನಿಂದ ಬರ್ಬರವಾಗಿ ಚುಚ್ಚಿ ಕೊಲೆ ಮಾಡಿದ್ದಾನೆ.

ಕೊಲೆಯಾದ ಯುವತಿಯನ್ನು 25 ವರ್ಷದ ಸ್ವಾತಿ ಎಂದು ಗುರುತಿಸಲಾಗಿದೆ. ಇನ್ಫೋಸಿಸ್ ನಲ್ಲಿ ಕೆಲಸ ಮಾಡುತ್ತಿದ್ದ ಸ್ವಾತಿ ಎಂದಿನಂತೆ ಕಚೇರಿಗೆ ತೆರಳಲು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅಲ್ಲಿಗೆ ಬಂದ ಯುವಕನೊಬ್ಬ ಚಾಕುವಿನಿಂದ ಆಕೆಗೆ ಮನಬಂದಂತೆ ಇರಿದಿದ್ದಾನೆ.

ಸ್ವಾತಿಯ ಮುಖಕ್ಕೆ ಹಾಗೂ ಕುತ್ತಿಗೆ ಭಾಗಗಳಿಗೆ ಚೂರಿ ಇರಿದಿದ್ದರಿಂದ ತೀವ್ರ ರಕ್ತಸ್ರಾವದಿಂದಾಗಿ ಕೆಲ ನಿಮಿಷದಲ್ಲೇ ರೈಲ್ವೇ ನಿಲ್ದಾಣದಲ್ಲೇ ಆಕೆ ಮೃತಪಟ್ಟಿದ್ದಾರೆ.

ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸ್ವಾತಿ ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ವಿಚಾರಣೆ ನಡೆಸುತ್ತಿದ್ದಾರೆ.

SCROLL FOR NEXT