13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಬೆಂಕಿ ಹಚ್ಚಿದ ರಾಕ್ಷಸರು
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿರುವ ದಾರುಣ ಘಟನೆ ರಾಜಸ್ತಾನದ ಶ್ರೀ ಗಂಗಾನಗರದಲ್ಲಿ ನಡೆದಿದೆ...
ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ನಂತರ ಬೆಂಕಿ ಹಚ್ಚಿರುವ ದಾರುಣ ಘಟನೆ ರಾಜಸ್ತಾನದ ಶ್ರೀ ಗಂಗಾನಗರದಲ್ಲಿ ನಡೆದಿದೆ.
ಬಾಲಕಿಯ ದೇಹ ಶೇ. 75 ರಷ್ಟು ಭಾಗ ಸುಟ್ಟು ಹೋಗಿದೆ. ತನ್ನ ಪೋಶಕರು ಮನೆಯಲ್ಲಿ ಇಲ್ಲದಾಗ ವಿಕ್ಕಿ ಮತ್ತು ಸೋನು ಹಾಗೂ ವಿಜಯ್ ಎಂಬುವರು ಆಕೆಯನ್ನು ಎತ್ತಿಕೊಂಡು ಹೋಗಿ ಆಕೆಯ ಮನೆಯ ಛಾವಣಿ ಮೇಲೆ ಗುರುವಾರ ರಾತ್ರಿ ಅತ್ಯಾಚಾರ ನಡೆಸಿದ್ದಾರೆ. ಮತ್ತು ಶನಿವಾರ ಬೆಳಗ್ಗೆ ಆಕೆಗೆ ಬೆಂಕಿ ಹಚ್ಚಲಾಯಿತು ಎಂದು ಸಂತ್ರಸ್ತೆ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ವಿಕ್ಕಿಯನ್ನು ಬಂಧಿಸಿರುವ ಪೊಲೀಸರು ಮತ್ತಿಬ್ಬರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.