ನರೇಂದ್ರ ಮೋದಿ 
ದೇಶ

ತುರ್ತು ಪರಿಸ್ಥಿತಿ ಭಾರತದ ಕರಾಳ ಅಧ್ಯಾಯ: ಪ್ರಧಾನಿ ಮೋದಿ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

ನವದೆಹಲಿ: ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನೆಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತುರ್ತು ಪರಿಸ್ಥಿತಿಯನ್ನು ಭಾರತದ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ.

ತುರ್ತು ಪರಿಸ್ಥಿತಿಯಂತಹ ಕರಾಳ ಅಧ್ಯಾಯದ ಹೊರತಾಗಿಯೂ ಭಾರತದ ಜನತೆ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ದೇಶದ ಜನರ ಧ್ವನಿಯನ್ನು ಅಡಗಿಸುವಂತಹ ದಿನಗಳಿದ್ದವು, ಆದರೆ ಈಗ ದೇಶದ ಜನತೆ ಸರ್ಕಾರದ ಕಾರ್ಯವೈಖರಿ ಕುರಿತು ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಪ್ರಕಟಿಸುತ್ತಿದ್ದಾರೆ ಎಂದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

1975 ರಲ್ಲಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಕೆಯಾದಾಗ ಸಾವಿರಾರು ರಾಜಕೀಯ ಕಾರ್ಯಕರ್ತರು ಹಾಗೂ ವಿದ್ಯಾರ್ಥಿ ನಾಯಕರುಗಳನ್ನು ಕಾರಣವೇ ಇಲ್ಲದೆ ಬಂಧಿಸಲಾಗಿತ್ತು. ಜನರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳಲಾಗಿತ್ತು, ಜಯಪ್ರಕಾಶ್ ನಾರಾಯಣ್ ಸೇರಿದಂತೆ ಹಲವು ರಾಜಕೀಯ ಮುಖಂಡರ ಬಂಧನದ ಮೂಲಕ ಇಡೀ ದೇಶವೇ ಒಂದು ಬೃಹತ್ ಜೈಲಾಗಿ ಪರಿವರ್ತನೆಯಾಗಿತ್ತು ಎಂದು ಮೋದಿ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!