ಸಾಂದರ್ಭಿಕ ಚಿತ್ರ 
ದೇಶ

ವೆಬ್ ಸೈಟ್ ನಲ್ಲಿ ಪ್ರಕಟವಾಗಿದ್ದು ಕರಡು ಅರಣ್ಯ ನೀತಿಯಲ್ಲ: ಸರ್ಕಾರ ಸ್ಪಷ್ಟನೆ

ಕಳೆದ ಜೂನ್ 16ರಂದು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದ ಕರಡು ರಾಷ್ಟ್ರೀಯ ಅರಣ್ಯ ನೀತಿಯನ್ನು ನಿರಾಕರಿಸಿರುವ ಅರಣ್ಯ ಮತ್ತು ಪರಿಸರ ಸಚಿವಾಲಯ...

ನವದೆಹಲಿ: ಕಳೆದ ಜೂನ್ 16ರಂದು ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದ ಕರಡು ರಾಷ್ಟ್ರೀಯ ಅರಣ್ಯ ನೀತಿಯನ್ನು ನಿರಾಕರಿಸಿರುವ ಅರಣ್ಯ ಮತ್ತು ಪರಿಸರ ಸಚಿವಾಲಯ, ಅದು ಅರಣ್ಯ ನೀತಿ ಅಲ್ಲವೇ ಅಲ್ಲ, ಸರ್ಕಾರಿ ಸಂಸ್ಥೆಯೊಂದು ನಡೆಸಿದ ಅಧ್ಯಯನವಷ್ಟೆ ಎಂದು ಹೇಳಿದೆ.

ಕರಡು ನೀತಿ ಎಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಸಮಾಜದ ಅನೇಕ ವರ್ಗಗಳಿಂದ ಟೀಕೆಯ ಸುರಿಮಳೆ ಹರಿದುಬಂದಿತ್ತು. ಸರ್ಕಾರದ ಅರಣ್ಯ ಹಕ್ಕು ಕಾಯ್ದೆಗೆ ವಿರುದ್ಧವಾಗಿದ್ದು, ಖಾಸಗಿ ಒಡೆತನಕ್ಕೆ ಪ್ರೋತ್ಸಾಹ ನೀಡುತ್ತದೆ ಎಂದು ಅನೇಕ ಮಂದಿ ಆರೋಪಿಸಿದ್ದರು. ಸಚಿವಾಲಯದ ವೆಬ್ ಸೈಟ್ ನಲ್ಲಿ ಪ್ರಕಟಗೊಂಡ 10 ದಿನಗಳ ನಂತರ ಸ್ಪಷ್ಟನೆ ನೀಡಿರುವ ಸಚಿವಾಲಯ, ಇದು ಭೋಪಾಲ್ ನ ಭಾರತೀಯ ಅರಣ್ಯ ನಿರ್ವಹಣಾ ಸಂಸ್ಥೆ ನಡೆಸಿರುವ ಅಧ್ಯಯನದ ವರದಿಯನ್ನು ಅಪ್ ಲೋಡ್ ಮಾಡಲಾಗಿದೆ ಎಂದು ಹೇಳಿದೆ.

ಅರಣ್ಯ ಸಚಿವಾಲಯದ ಮಹಾ ನಿರ್ದೇಶಕ ಎಸ್.ಎಸ್.ನೇಗಿ, ಅರಣ್ಯ ನೀತಿ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಭಾರತೀಯ ಅರಣ್ಯ ನಿರ್ವಹಣಾ ಸಂಸ್ಥೆ ತಯಾರಿಸಿದ ವರದಿಯನ್ನು ವೆಬ್ ಸೈಟ್ ನಲ್ಲಿ ಪ್ರಮಾದವಶಾತ್ ಅಪ್ ಲೋಡ್ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ

'ನಾನು ಕ್ಯಾಬ್‌ನಲ್ಲಿ ಓಡಾಡೋ ಹುಡುಗಿ ಕಣ್ರೋ.. ಹೋಗ್ಲಿ ಪಾಪ ಅಂತಾ ಬಸ್`ನಲ್ಲಿ ಬಂದೆ': MTC ಬಸ್‌ನಲ್ಲಿ ಕುಡಿದ ಮತ್ತಿನಲ್ಲಿ ಯುವತಿ ರಂಪಾಟ, Video ವೈರಲ್

ಅಮೆರಿಕ ಸೇನೆಯ ಮಾಜಿ ಮೇಜರ್‌ಗೆ ಶೂಟ್ ಮಾಡುವ ಮೂಲಕ ಮರಣದಂಡನೆ ಶಿಕ್ಷೆ: 65 ವರ್ಷಗಳಲ್ಲಿ ಇದೇ ಮೊದಲು!