ದೇಶ

ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದರ ಬಗ್ಗೆ ಮನ್ ಕಿ ಬಾತ್ ನಲ್ಲಿ ಮಾತನಾಡಿ: ಪ್ರಧಾನಿಗೆ ಕೇಜ್ರಿವಾಲ್ ಒತ್ತಾಯ

Srinivas Rao BV

ನವದೆಹಲಿ: ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ನಲ್ಲಿ ದೇಶದ ಜನರಿಗೆ ಸ್ಪಷ್ಟನೆ ನೀಡಬೇಕೆಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಆಗ್ರಹಿಸಿದ್ದಾರೆ.

ಎನ್ ಎಸ್ ಜಿ ಸದಸ್ಯತ್ವಕ್ಕೆ ಬೆಂಬಲ ಪಡೆಯುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಲವು ದೇಶಗಳನ್ನು ಸುತ್ತಿದರೂ ಏಕೆ ಅದು ಫಲಪ್ರದವಾಗಲಿಲ್ಲ ಎಂಬುದನ್ನು ಮೋದಿ ಮನ್ ಕಿ ಬಾತ್ ನಲ್ಲಿ ದೇಶದ ಜನರಿಗೆ ವಿವರಿಸುತ್ತಾರೆ ಎಂದು ನಿರೀಕ್ಷಿಸುತ್ತಿದ್ದೇನೆ ಎಂದು ಕೇಜ್ರಿವಾಲ್ ಟ್ವಿಟ್ ಮಾಡಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಟೀಕೆಗೂ ಮುನ್ನ ಭಾರತಕ್ಕೆ ಎನ್ ಎಸ್ ಜಿ ಸದಸ್ಯತ್ವ ಕೈತಪ್ಪಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿ ಟೀಕಿಸಿದ್ದ ಕಾಂಗ್ರೆಸ್, ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಅನಗತ್ಯ ಕೆಲಸಗಳನ್ನು ಮಾಡುತ್ತಿದ್ದು, ಇದರಿಂದ ಭಾರತಕ್ಕೆ ಮುಜುಗರ ಉಂಟಾಗುತ್ತಿದೆ ಎಂದು ಆರೋಪಿಸಿತ್ತು. ಎನ್ ಎಸ್ ಜಿ ಸದಸ್ಯ ರಾಷ್ಟ್ರಗಳೊಂದಿಗೆ ಪರಮಾಣು ವ್ಯಾಪಾರಕ್ಕೆ ಸಂಬಂಧಿಸಿದಂತೆ ಅಡೆತಡೆಗಳು ಇರಲಿಲ್ಲ. ಆದರೂ ಭಾರತ ಎನ್ ಎಸ್ ಜಿ ಸದಸ್ಯತ್ವ ಪಡೆಯಲು ಮುಂದಾಗಿದ್ದು ಅನಗತ್ಯ ಕ್ರಮವಾಗಿತ್ತು. ಈಗ ಭಾರತಕ್ಕೆ ಎನ್ ಎಸ್ ಜಿ  ಸದಸ್ಯತ್ವ ಕೈತಪ್ಪಿರುವುದರಿಂದ ಭಾರತವನ್ನು ಪಾಕಿಸ್ತಾನದೊಂದಿಗೆ ಹೋಲಿಸುವಂತಾಗಿದೆ ಎಂದು ಕಾಂಗ್ರೆಸ್ ಮುಖಂಡ, ವಕ್ತಾರ ಆನಂದ್ ಶರ್ಮಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

SCROLL FOR NEXT