ನವದೆಹಲಿ: ಕೇಂದ್ರ ಸಚಿವರು, ಅಧಿಕಾರಿಗಳ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಸುಬ್ರಹ್ಮಣಿಯನ್ ಸ್ವಾಮಿ ಅವರ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ತಳ್ಳಿ ಹಾಕಿದ ನಂತರ ಸುಬ್ರಹ್ಮಣಿಯನ್ ಸ್ವಾಮಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕೃಷ್ಣನ ಬೋಧನೆಗಳನ್ನು ಉಲ್ಲೇಖಿಸಿ ಟ್ವಿಟ್ ಮಾಡಿರುವ ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್, ಒಂದು ಸಣ್ಣ ವ್ಯತ್ಯಾಸ ವಿವಿಧ ಆಯಾಮಗಳಲ್ಲಿ ಬದಲಾವಣೆ ತರಲಿವೆ, ಆದ್ದರಿಂದ ಕೃಷ್ಣ ಸುಖ ದುಃಖಗಳನ್ನು ಸಮಚಿತ್ತದಿಂದ ಸ್ವೀಕರಿಸಿ ಯುದ್ಧಕ್ಕೆ ಸಿದ್ಧನಾಗು ಎಂದು ಬೋಧಿಸಿದ್ದಾನೆ ಎಂದು ಸುಬ್ರಹ್ಮಣಿಯನ್ ಸ್ವಾಮಿ ಟ್ವೀಟ್ ನಲ್ಲಿ ಬರೆದಿದ್ದಾರೆ.