ಕೊಲೆಯಾದ ಸ್ವಾತಿ 
ದೇಶ

ವೈಯಕ್ತಿಕ ದ್ವೇಷದಿಂದ ಟೆಕ್ಕಿ ಸ್ವಾತಿ ಕೊಲೆ?

ಇನ್‌ಪೋಸಿಸ್ ಉದ್ಯೋಗಿ ಸ್ವಾತಿ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಾಗಿರಬಹುದು ಎಂದು ಚೆನ್ನೈ ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ...

ಚೆನ್ನೈ: ಇನ್‌ಪೋಸಿಸ್ ಉದ್ಯೋಗಿ ಸ್ವಾತಿ ಕೊಲೆಗೆ ವೈಯಕ್ತಿಕ ದ್ವೇಷ ಕಾರಣವಾಗಿರಬಹುದು ಎಂದು ಚೆನ್ನೈ ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.

ನುಂಗಬಾಕ್ಕಂ ರೈಲ್ವೆ ನಿಲ್ದಾಣದಲ್ಲಿ ಹಾಡಹಗಲೇ ನಡೆದಿದ್ದ ಸ್ವಾತಿ ಕೊಲೆ  ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಅಪರಿಚಿತನ ರೇಖಾ ಚಿತ್ರ ಬಿಡಿಸಲು ಸಿದ್ಧತೆ ನಡೆಸಿದ್ದಾರೆ.

ಸ್ವಾತಿಯನ್ನು ಹಿಂಬಾಲಿಸುತ್ತಿದ್ದ ವ್ಯಕ್ತಿಯ ರೇಖಾಚಿತ್ರ ಬಿಡಿಸಲು ಆಕೆ ಮೂವರು ಸ್ನೇಹಿತರ ಸಹಾಯ ಪಡೆದುಕೊಂಡಿದ್ದಾರೆ. ಜೊತೆಗೆ ಪರ್ನೂರ್ ನಗರದ ಮಹೀಂದ್ರಾ ವರ್ಲ್ಡ್ ಬಳಿ ಅಳವಡಿಸಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪಡೆದುಕೊಂಡಿದ್ದಾರೆ. ಕಳೆದ ಎರಡು ವಾರಗಳಿಂದ ಅಪರಿಚಿತ ವ್ಯಕ್ತಿ ಸ್ವಾತಿಯನ್ನು ಹಿಂಬಾಲಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ ಜಯಲಲಿತಾ ಪರಿಶೀಲನಾ ಸಬೆ ನಡೆಸಿದ್ದು, ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ನಗರ ಪೊಲೀಸ್ ಆಯುಕ್ತ ಟಿ.ಕೆ ರಾಜೇಂದ್ರಮ್ ಕೊಲೆ ನಡೆದ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ರತ್ಯಕ್ಷ ದರ್ಶಿಗಳ ವಿವರಣೆ ಪಡೆಯುವಂತೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಕರಣವನ್ನು ಎಲ್ಲಾ ಆಯಾಮಗಳಿಂದ ಪರಿಶೀಲನೆ ನಡೆಸುತ್ತಿದ್ದು, ವೈಯಕ್ತಿಕ ದ್ವೇಷಕ್ಕಾಗಿ ಕೊಲೆ ನಡೆದಿರಬಹುದು ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!