ಸಂಗ್ರಹ ಚಿತ್ರ 
ದೇಶ

ಪುಲ್ವಾಮದಲ್ಲಿ ಯೋಧರು-ಉಗ್ರರ ನಡುವೆ ಗುಂಡಿನ ಕಾಳಗ: 2 ಉಗ್ರರು ಅಡಗಿರುವ ಶಂಕೆ

ಜಮ್ಮ ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿ ಕಾಳಗ ನಡೆಯುತ್ತಿದ್ದು, ಇಬ್ಬರು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ...

ಮಲವರ: ಜಮ್ಮ ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಯೋಧರು ಮತ್ತು ಉಗ್ರರ ನಡುವೆ ಗುಂಡಿ ಕಾಳಗ ನಡೆಯುತ್ತಿದ್ದು, ಇಬ್ಬರು ಉಗ್ರರು ಅಡಗಿರುವ ಶಂಕೆ ವ್ಯಕ್ತವಾಗಿದೆ.

ನಿನ್ನೆಯಷ್ಟೇ ಬಾರಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದೆ ಇಬ್ಬರು ಉಗ್ರರನ್ನು ಬಂಧಿಸುವಲ್ಲಿ ಯೋಧರು ಯಶಸ್ವಿಯಾಗಿದ್ದರು.

ಇದರಂತೆ ಮತ್ತಷ್ಟು ಉಗ್ರರು ಅಡಗಿಕೊಂಡಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಯೋಧರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಮುಂದುವರೆಸಿದ್ದರು. ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆಂದು ತಿಳಿದುಬಂದಿದೆ.

ಅಮರ್ಗಡ್ ಪ್ರದೇಶದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಗೆ ಸೇರಿದ ಮತ್ತಿಬ್ಬರು ಉಗ್ರರು ಅಡಗಿಕೊಂಡಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದೀಗ ಭಾರತೀಯ ಸೇನೆ 52 ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ (ಎಸ್ಒಜಿ) ತಂಡ ಕಾರ್ಯಾಚರಣೆ ನಡೆಸುತ್ತಿದೆ. ಘಟನೆಯಲ್ಲಿ ಈ ವರೆಗೂ ಯಾವುದೇ ಸಾವು-ನೋವುಗಳ ಸಂಭವಿಸಿರುವುದಾಗಿ ವರದಿಯಾಗಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್