ರಾಬರ್ಟ್ ವಾದ್ರಾ 
ದೇಶ

ಬಿಕಾನೇರ್ ಭೂಹಗರಣ: ರಾಬರ್ಟ್ ವಾದ್ರಾಗೆ ಇಡಿಯಿಂದ ಮತ್ತೊಂದು ಸಮನ್ಸ್

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ನಡೆಯುತ್ತಿರುವ ಬೆನ್ನಲ್ಲೇ, ಜಾರಿ ನಿರ್ದೇಶನಾಲಯ ರಾಜಸ್ಥಾನದ ಬಿಕಾನೇರ್​ಭೂಹಗರಣಕ್ಕೆ ಸಂಬಂಧಿಸಿದಂತೆ ವಾದ್ರಾ ಪಾಲುದಾರಿಕೆಯ ಕಂಪನಿಗೆ ಸಮನ್ಸ್ ಜಾರಿ ಮಾಡಿದೆ.
ವಾದ್ರಾ ಪಾಲುದಾರಿಕೆಯ ಸ್ಕೈಲೈಟ್ ಹಾಸ್ಪಿಟಾಲಿಟಿ ಸಂಸ್ಥೆಗೆ ಜಾರಿ ನಿರ್ದೇಶನಾಲಯ ಮತ್ತೊಂದು ಸಮನ್ಸ್ ನೀಡಿದೆ. ಒಂದು ತಿಂಗಳು ಹಿಂದೆಯೇ ವಾದ್ರಾಗೆ ಒಂದು ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ಕಂಪನಿ ದಾಖಲಾತಿಗಳನ್ನು ಸಲ್ಲಿಸಲು ವಿಫಲವಾಗಿತ್ತು. ಹಾಗಾಗಿ ಈಗ ಎರಡನೇ ಬಾರಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ. 
ಮುಂದಿನ ಎರಡು ವಾರದೊಳಗೆ ದಾಖಲಾತಿಗಳನ್ನು ವಿಶೇಷ ತನಿಖಾಧಿಕಾರಿಗೆ ಸಲ್ಲಿಸಬೇಕು ಎಂದು ಜಾರಿ ನಿರ್ದೇಶನಾಲಯ ವಾದ್ರಾ ಸಂಸ್ಥೆಗೆ ಸೂಚಿಸಿದೆ.
ಬಿಕಾನೇರ್ ಬಳಿಯ ಕೋಲ್ಯಾಟ ಪ್ರದೇಶದಲ್ಲಿ 275 ಬಿಘಾ ಭೂಮಿ ಖರೀದಿ ಮಾಡಿರುವ ಸಂಬಂಧ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಖರೀದಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಜಾರಿ ನಿರ್ದೇಶನಾಲಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದೆ. ಹಗರಣಕ್ಕೆ ಸಂಬಂಧಿಸಿದ ಜನರಿಗೆ ಮತ್ತು ಇತರ ಸಂಸ್ಥೆಗಳಿಗೆ ಜಾರಿ ನಿರ್ದೇಶನಾಲಯ ಶೀಘ್ರದಲ್ಲೇ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ