ಸಿಸಿಟಿವಿ ದೃಶ್ಯಾವಳಿ 
ದೇಶ

ಪ್ರಯಾಣಿಕರ ಬ್ಯಾಗ್‌ನಲ್ಲಿ ಚಿನ್ನಾಭರಣ ಕದ್ದ ದೆಹಲಿ ವಿಮಾನ ನಿಲ್ದಾಣದ ಸಿಬ್ಬಂದಿ

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಬೆಲೆ ಬಾಳುವ ಚಿನ್ನಾಭರಣ ದೋಚುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ...

ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಬೆಲೆ ಬಾಳುವ ಚಿನ್ನಾಭರಣ ದೋಚುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಇತ್ತೀಚೆಗಷ್ಟೇ ದೆಹಲಿಯಿಂದ ದುಬೈಗೆ ಪ್ರಯಾಣಿಸಿದ ಮಹಿಳೆಯೊಬ್ಬರು ತಮ್ಮ ಲಗೇಜ್ ಬ್ಯಾಗಿನಲ್ಲಿ ಇಟ್ಟಿದ್ದ ಬೆಲೆಬಾಳುವ ಚಿನ್ನಾಭರಣ ಕಳ್ಳತನವಾಗಿದೆ ಎಂದು ದೂರಿದ್ದರು. ಈ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸಿದಾಗ ವಿಮಾನಕ್ಕೆ ಪ್ರಯಾಣಿಕರ ಲಗೇಜ್ ಗಳನ್ನು ಕೊಂಡೊಯ್ಯುವ ಸಿಬ್ಬಂದಿ ಪ್ರಯಾಣಿಕರ ಲಗೇಜ್ ಗಳನ್ನು ಶೋಧಿಸುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. 
ಚಿನ್ನಾಭರಣಗಳು ಕಳವಾಗಿರುವುದಾಗಿ ಮಹಿಳೆ ದೂರಿದ್ದರು. ಮೊದ ಮೊದಲು ಯಾರು ಚಿನ್ನಾಭರಣಗಳನ್ನು ದೋಚಿದ್ದಾರೆ ಎಂದು ತನಿಖಾಧಿಕಾರಿಗಳಿಗೆ ಸಿಕ್ಕಿರಲಿಲ್ಲ. ಕೊನೆಗೆ ಸಿಸಿಟಿವಿಯ ದೃಶ್ಯವಳಿಗಳನ್ನು ಪರಿಶೀಲಿಸಿದ ನಂತರ ಎರ್ ಇಂಡಿಯಾ-ಎಸ್ಎಟಿಎಸ್ ನ ಇಬ್ಬರು ಸಿಬ್ಬಂದಿಯ ಕರಾಮತ್ತು ಬಹಿರಂಗಗೊಂಡಿದೆ. 
ಪ್ರಯಾಣಿಕರ ಬ್ಯಾಗ್ ನಿಂದ ಚಿನ್ನಾಭರಣ ಕದಿಯುತ್ತಿದ್ದವರನ್ನು ಅಮಿತ್ ಕುಮಾರ್ ಮತ್ತು ರೋಹಿತ್ ಕುಮಾರ್ ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT