ಅಮರನಾಥ್ ಯಾತ್ರೆ 
ದೇಶ

ಅಮರನಾಥ್ ಯಾತ್ರೆಗೆ ತೆರಳಿದ ಯಾತ್ರಾರ್ಥಿಗಳ ಮೊದಲ ತಂಡ

ಜುಲೈ.2 ರಿಂದ ಜಮ್ಮು-ಕಾಶ್ಮೀರದಲ್ಲಿ ಅಮರನಾಥ್ ಯಾತ್ರೆ ಪ್ರಾರಂಭವಾಗಲಿದ್ದು, 1,138 ಯಾತ್ರಾರ್ಥಿಗಳ ಮೊದಲ ತಂಡ ಜಮ್ಮುಗೆ ಹೊರಟಿದೆ.

ಜಮ್ಮು: ಜುಲೈ.2 ರಿಂದ ಜಮ್ಮು-ಕಾಶ್ಮೀರದಲ್ಲಿ ಅಮರನಾಥ್ ಯಾತ್ರೆ ಪ್ರಾರಂಭವಾಗಲಿದ್ದು, 1,138 ಯಾತ್ರಾರ್ಥಿಗಳ ಮೊದಲ ತಂಡ ಜಮ್ಮುಗೆ ಹೊರಟಿದೆ.

ಜಮ್ಮು-ಕಾಶ್ಮೀರದ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್, ಲೋಕಸಭಾ ಸದಸ್ಯ ಜುಗಲ್ ಕಿಶೋರ್, ಕಿರಿಯ ಸಚಿವರಾದ ಪ್ರಿಯಾ ಸೇಥಿ, ಅಮರನಾಥ್ ಯಾತ್ರೆಗೆ ಯಾತ್ರಾರ್ಥಿಗಳ ಪ್ರಯಾಣಕ್ಕೆ ಚಾಲನೆ ನೀಡಿದ್ದಾರೆ.  ಮೊದಲ ತಂಡದಲ್ಲಿ ತೆರಳಿರುವ 1,138 ಯಾತ್ರಾರ್ಥಿಗಳ ಪೈಕಿ 225 ಮಹಿಳೆಯರು, 900 ಪುರುಷರು, 13 ಮಕ್ಕಳು ತೆರಳಿದ್ದಾರೆ. ಅಮರನಾಥ ಯಾತ್ರೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸಹ ಜುಲೈ.2 ರಂದು ಅಮರನಾಥ ಗುಹೆಯಲ್ಲಿ ಶಿವನ ಲಿಂಗದ ದರ್ಶನ ಪಡೆಯಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!