ನೇತಾಜಿ ಸುಭಾಷ್ ಚಂದ್ರ ಬೋಸ್ 
ದೇಶ

ನೇತಾಜಿಗೆ ಸಂಬಂಧಪಟ್ಟ ದಾಖಲೆ ಒದಗಿಸಲು ವಿದೇಶಗಳಿಗೆ ಭಾರತ ಮನವಿ

ನೇತಾಜಿ ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದಂತಹ ದಾಖಲೆಗಳಿದ್ದರೆ ಭಾರತಕ್ಕೆ ನೀಡಿ ಎಂದು ಜಪಾನ್, ರಷ್ಯಾ, ಬ್ರಿಟನ್...

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಗೆ ಸಂಬಂಧಿಸಿದಂತಹ ದಾಖಲೆಗಳಿದ್ದರೆ ಭಾರತಕ್ಕೆ ನೀಡಿ ಎಂದು ಜಪಾನ್, ರಷ್ಯಾ, ಬ್ರಿಟನ್ ಸೇರಿದಂತೆ ಹಲವು ದೇಶಗಳಿಗೆ ಮನವಿ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಗೃಹ ಇಲಾಖೆಯ ರಾಜ್ಯ ಸಚಿವ ಹರಿಬಾಯ್‌ ಚೌಧರಿ ಇಂದು ರಾಜ್ಯಸಭೆಯಲ್ಲಿ ಈ ವಿಷಯವನ್ನು ಹೇಳಿದ್ದು, ನೇತಾಜಿ ಸಂಬಂಧಪಟ್ಟ ದಾಖಲೆಗಳಿದ್ದರೇ ಅದನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಹಲವಾರು ದೇಶಗಳಿಗೆ ಮನವಿ ಮಾಡಲಾಗಿದೆ. ಆಸ್ಟ್ರೇಲಿಯಾ, ಜರ್ಮನಿ, ಇಟಲಿ, ಜಪಾನ್, ರಷ್ಯಾ, ಬ್ರಿಟನ್ ಮತ್ತು ಅಮೆರಿಕಾ ಸರ್ಕಾರಗಳಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ರಷ್ಯನ್ ಫೆಡರೇಷನ್, ಜರ್ಮನಿ ಫೆಡರಲ್ ರಿಪಬ್ಲಿಕ್, ಜಪಾನ್ ಮತ್ತು ಇಂಗ್ಲೆಂಡ್ ನಿಂದ ಪ್ರತಿಕ್ರಿಯೆ ಬಂದಿದೆ. ಆದರೆ, ಆಸ್ಟ್ರೇಲಿಯಾ, ಇಟಲಿ ಮತ್ತು ಅಮೆರಿಕಾದಿಂದ ಇನ್ನು ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಹೇಳಿದ್ದಾರೆ.
ಈಗಾಗಲೇ ಸರ್ಕಾರದ ಬಳಿ ಇದ್ದ ನೇತಾಜಿಗೆ ಸಂಬಂಧ ಪಟ್ಟ ದಾಖಲೆಗಳನ್ನು ಬಹಿರಂಗಗೊಳಿಸಲಾಗಿದೆ. ಇವೆಲ್ಲವೂ ರಾಷ್ಟ್ರೀಯ ಪತ್ರಾಗಾರ ಇಲಾಖೆಗೆ ಹಸ್ತಾಂತರಿಸಲಾಗಿದೆ. ಮತ್ತಷ್ಟು ದಾಖಲೆಗಳನ್ನು ಕಲೆ ಹಾಕುವುದಕ್ಕೆ ಭಾರತ ಪ್ರಯತ್ನಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!