ಇಂಫಾಲ: ಮಣಿಪುರದ ಮಾನವ ಹಕ್ಕುಗಳ ಹೋರಾಟಗಾರ್ತಿ ಐರೊಮ್ ಚಾನು ಶರ್ಮೀಳಾ(42) ಅವರನ್ನು ಮತ್ತೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು ವಿರೋಧಿಸಿ ಮತ್ತೆ ಉಪವಾಸ ನಡೆಸುತ್ತಿರುವ ಮಣಿಪುರದ ಮಾನವ ಹಕ್ಕುಗಳ ಹೋರಾಟಗಾರ್ತಿಯನ್ನು ಮತ್ತೆ ಬಂಧಿಸಲಾಗಿದೆ.
ಕಳೆದ ಶುಕ್ರವಾರ ಆತ್ಮಹತ್ಯೆ ಯತ್ನ ಆರೋಪದ ಮೇಲೆ ಪೊಲೀಸರು ಶರ್ಮಿಳಾ ಅವರನ್ನು ಬಂಧಿಸಿದ್ದರು. ‘ಶರ್ಮಿಳಾ ಅವರನ್ನು ಆತ್ಮಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಬಂಧಿಸಿ, ಸ್ಥಳೀಯ ನ್ಯಾಯಾಲಯಕ್ಕೆ ಅವರನ್ನು ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಅವರನ್ನು ಬಿಡುಗಡೆಗೊಳಿಸಿತ್ತು.
ಆದರೆ ತಮ್ಮ ಹೋರಾಟವನ್ನು ನಿಲ್ಲಿಸದ ಶರ್ಮೀಳಾ ಮತ್ತೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಈ ಹಿನ್ನಲೆಯಲ್ಲಿ ಮತ್ತೆ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶರ್ಮೀಳಾ ಅವರ ವಿರುದ್ಧ ಐಪಿಸಿ ಸೆಕ್ಷನ್ 309(ಆತ್ಮಹತ್ಯೆ ಯತ್ನ) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶರ್ಮಿಳಾ ಅವರ ಮೇಲಿದ್ದ ಆತ್ಮಹತ್ಯೆ ಯತ್ನ ಪ್ರಕರಣವನ್ನು ಮಂಗಳವಾರವಷ್ಟೆ ಇತ್ಯರ್ಥಪಡಿಸಿದ್ದ ಸ್ಥಳೀಯ ಕೋರ್ಟ್, ಬಂಧನದಿಂದ ಅವರನ್ನು ಬಿಡುಗಡೆಗೊಳಿಸಿತ್ತು. ಈಶಾನ್ಯ ರಾಜ್ಯಗಳಲ್ಲಿ ಜಾರಿಯಲ್ಲಿರುವ ‘ಸೇನಾಪಡೆಗಳ ವಿಶೇಷ ಅಧಿಕಾರ’ ಕಾಯ್ದೆಯನ್ನು ಸರ್ಕಾರ ಕೂಡಲೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಶರ್ಮಿಳಾ ಅವರು 14 ವರ್ಷಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
2014ರ ಆಗಸ್ಟ್‌ನಲ್ಲಿ ಅವರನ್ನು ಬಿಡುಗಡೆಗೊಳಿಸಲಾಗಿತ್ತಾದರೂ ಮತ್ತೆ ತಮ್ಮ ಉಪವಾಸ ಮುಂದುವರಿಸಿದ್ದರಿಂದ ಅವರ ಪ್ರಾಣಕ್ಕೆ ಕುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆದರೆ, ಸೋಮವಾರ ಅವರನ್ನು ಬಿಡುಗಡೆಗೊಳಿಸುವಂತೆ ನ್ಯಾಯಾಲಯ ಆದೇಶಿಸಿ, ಮಂಗಳವಾರ ಬಿಡುಗಡೆಗೊಳಿಸಲಾಗಿತ್ತು. ಬಿಡುಗಡೆಗೊಂಡ ನಂತರ ಶರ್ಮೀಳಾ ನೇರವಾಗಿ ಸಾರ್ವಜನಿಕ ಪಾರ್ಕ್ ಗೆ ತೆರಳಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಈ ಹಿನ್ನಲೆಯಲ್ಲಿ ಬುಧವಾರ ಮತ್ತೊಮ್ಮೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics