ಸ್ಪೈಸ್ ಜೆಟ್ ವಿಮಾನದ ಟೈರ್ ಸ್ಫೋಟ: ತುರ್ತು ಭೂಸ್ಪರ್ಶ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕೊತಾಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಟಯರ್ ಬರ್ಸ್ಟ್ ಆದ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ...
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕೋಲ್ಕೊತಾಗೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನದ ಟಯರ್ ಸ್ಫೋಟಗೊಂಡ ಪರಿಣಾಮ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿತು.
ಬೆಂಗಳೂರು ನಿಲ್ದಾಣದಿಂದ ಕೊಲ್ಕೋತಾಗೆ ವಿಮಾನ ತೆರಳುತ್ತಿತ್ತು. ಮಾರ್ಗಮಧ್ಯದಲ್ಲಿ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿದ್ದು, ಪೈಲಟ್ ಕೋಲ್ಕೊತಾ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ತುರ್ತು ಲ್ಯಾಂಡ್ ಮಾಡಿದ್ದಾರೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.
ಎಸ್ ಜಿ 517 ವಿಮಾನ ಬೆಂಗಳೂರಿನಿಂದ ಕೊಲ್ಕೊತ್ತಾಗೆ ತೆರಳುತ್ತಿತ್ತು. ಭಾರಿ ದುರಂತವೊಂದು ತಪ್ಪಿದ ಹಿನ್ನೆಲೆಯಲ್ಲಿ ನೂರಕ್ಕೂ ಹೆಚ್ಚು ಪ್ರಯಾಣಿಕರು ನಿಟ್ಟುಸಿರು ಬಿಟ್ಟರು. ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.