ಸುಶಾಂತ್ ಮಿಶ್ರಾ-ತನ್ಮಯ್ ಮಿಶ್ರಾ 
ದೇಶ

ತಂದೆಯ ಜೀವ ಉಳಿಸಿ ಎಂದು ಮೋದಿಗೆ ಪತ್ರ: ಮಕ್ಕಳಿಗೆ ಪಿಎಂಒ ನೆರವಿನ ಭರವಸೆ

ಅಸ್ತಮಾ ರೋಗದಿಂದ ಬಳಲುತ್ತಿರುವ ತಮ್ಮ ತಂದೆ ಸರೋಜ್ ಮಿಶ್ರಾರ ಜೀವ ಉಳಿಸುವಂತೆ ಪ್ರಧಾನಿ ಮೋದಿಗೆ ಮಕ್ಕಳಿಬ್ಬರು ಪತ್ರದ ಮೂಲಕ ಮನವಿ ಮಾಡಿದ್ದು...

ಕಾನ್ಪುರ: ಅಸ್ತಮಾ ರೋಗದಿಂದ ಬಳಲುತ್ತಿರುವ ತಮ್ಮ ತಂದೆ ಸರೋಜ್ ಮಿಶ್ರಾರ ಜೀವ ಉಳಿಸುವಂತೆ ಪ್ರಧಾನಿ ಮೋದಿಗೆ ಮಕ್ಕಳಿಬ್ಬರು ಪತ್ರದ ಮೂಲಕ ಮನವಿ ಮಾಡಿದ್ದು, ಮಕ್ಕಳಿಗೆ ಪಿಎಂಒ ನೆರವಿನ ಭರವಸೆ ನೀಡಿದೆ.

ಮಕ್ಕಳಿಬ್ಬರ ಮನವಿಗೆ ಸ್ಪಂದಿಸಿರುವ ಪಿಎಂಒ ನಿಮ್ಮ ತಂದೆಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದಾಗಿ ಆಶ್ವಾಸನೆ ನೀಡಿದ್ದು, ಜಿಲ್ಲಾಸ್ಪತ್ರೆಯಲ್ಲಿ ಸರೋಜ್ ಮಿಶ್ರಾರ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ವೈದ್ಯಕೀಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ಸರೋಜ್ ಮಿಶ್ರಾ ಕಳೆದ ಎರಡು ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಬಡವರಾಗಿದ್ದ ಇವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಅವರ ಇಬ್ಬರು ಮಕ್ಕಳಾದ ಸುಶಾಂತ್ ಮಿಶ್ರಾ ಮತ್ತು ತನ್ಮಯ್ ಮಿಶ್ರಾ ಪ್ರಧಾನಿ ಕಚೇರಿಗೆ ಸಹಾಯಕ್ಕಾಗಿ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಲೀಟರ್‌ಗೆ 8 ರೂ. ಏರಿಕೆಗೆ ಸಂಪುಟ ಸಮ್ಮತಿ!

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!