ದೇಶ

ರಾಜಕೀಯದಿಂದ ದೂರವಿರಲು ಕನ್ಹಯ್ಯಗೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸಲಹೆ

ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ವೆಂಕಯ್ಯ ನಾಯ್ಡು ಸಲಹೆ ನೀಡಿದ್ದಾರೆ.

ನವದೆಹಲಿ: ಸಂಸತ್ ನಲ್ಲಿ ಎಡಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಜೆ ಎನ್ ಯು ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ಗೆ ರಾಜಕೀಯದಿಂದ ದೂರವಿದ್ದು ಶಿಕ್ಷಣದತ್ತ ಗಮನ ಕೇಂದ್ರೀಕರಿಸಲು ಸಲಹೆ ನೀಡಿದ್ದಾರೆ.
ಕನ್ಹಯ್ಯ ಕುಮಾರ್ ವಿವಾದದಿಂದ ಉಂಟಾಗಿರುವ ಜನಪ್ರಿಯತೆಗೆ ಹೆಚ್ಚು ಗಮನ ಕೊಡದೇ ಫೆ.9 ರಂದು ನಡೆದಂತಹ ಘಟನೆಗಳು ಪುನಾರಾವರ್ತನೆಯಾಗದಂತೆ ಎಚ್ಚರ ವಹಿಸಲಿ ಎಂದು ವೆಂಕಯ್ಯ ನಾಯ್ಡು ಹೇಳಿದ್ದಾರೆ. ಜೆಎನ್ ಯು ವಿದ್ಯಾರ್ಥಿಗಳು ರಾಜಕೀಯದಿಂದ ದೂರ ಉಳಿಯಬೇಕು, ಒಂದು ವೇಳೆ ರಾಜಕೀಯದಲ್ಲಿ ತೀವ್ರವಾದ ಆಸಕ್ತಿಯುಳ್ಳವರಾದರೆ, ಶಿಕ್ಷಣ ಮೊಟಕುಗೊಳಿಸಿ ರಾಜಕೀಯ ಪಕ್ಷ ಸೇರಲಿ, ಕನ್ಹಯ್ಯ ಕುಮಾರ್ ನ ನೆಚ್ಚಿನ ಪಕ್ಷ ಸಂಸತ್ ನಲ್ಲಿ ಒಂದು ಅಂಕಿಯ ಸದಸ್ಯರ ಬಲ ಹೊಂದಿದೆ. ರಾಜಕೀಯ ಆಸಕ್ತಿಯನ್ನು ಇಟ್ಟುಕೊಂಡು, ಅಫ್ಜಲ್ ಗುರು, ಯಾಕೂಬ್ ಮೆಮನ್, ಮುಕ್ಬೂಲ್ ಭಟ್ ನಂತಹವರನ್ನು ಬೆಂಬಲಿಸಿ ವಿದ್ಯಾರ್ಥಿಗಳನ್ನು ಸೆಳೆಯುವ ಅಗತ್ಯವಿಲ್ಲ  ಎಂದು ಎಡಪಕ್ಷಗಳ ವಿರುದ್ಧ ವೆಂಕಯ್ಯ ನಾಯ್ಡು ವಾಗ್ದಾಳಿ ನಡೆಸಿದ್ದಾರೆ. ಜೆಎನ್ ಯು ನಲ್ಲಿ ರಾಷ್ಟ್ರವಿರೋಧಿ ಘೋಷಣೆ ಕೇಳಿಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆ ಮುಖಂಡ ಕನ್ಹಯ್ಯ ಕುಮಾರ್ ನನ್ನು ಪೊಲೀಸರು ಬಂಧಿಸಿ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಿದ್ದರು. ಕನ್ಹಯ್ಯ ಕುಮಾರ್ ಮಾ.3 ರಂದು ಜಾಮೀನು ಪಡೆದು ಹೊರಬಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT