ಸುಕ್ಮಾ ಎನ್ಕೌಂಟರ್: ಇಬ್ಬರು ಸಿಆರ್ಪಿಎಫ್ ಪೊಲೀಸರು ಸಾವು
ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್) ಸಿಬ್ಬಂದಿ ಮೃತಪಟ್ಟಿದ್ದು...
ಸುಕ್ಮಾ(ಛತ್ತೀಸ್ ಗಢ): ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿ ನಡುವಿನ ಗುಂಡಿನ ಕಾಳಗದಲ್ಲಿ ಇಬ್ಬರು ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ಪಿಎಫ್ ) ಸಿಬ್ಬಂದಿ ಮೃತಪಟ್ಟಿದ್ದು, 14 ಮಂದಿಗೆ ಗಾಯಗಳಾಗಿವೆ.
ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಕಳೆದ ರಾತ್ರಿ 12.30 ಸುಮಾರಿಗೆ ಮಾವೋವಾದಿಗಳ ವಿರುದ್ಧ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಕಾಳಗ ನಡೆದಿದೆ.
ಮಾವೋವಾದಿಗಳಿಗಾಗಿ ಭದ್ರತಾ ಸಿಬ್ಬಂದಿ, ಸಿಆರ್ಪಿಎಫ್ ಹಾಗೂ ರಾಜ್ಯ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ಮುಂದುವರೆಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.