ಮೆಹಬೂಬಾ ಮುಫ್ತಿಗೆ ಬಿಜೆಪಿ ಬೆಂಬಲ, ರಾಜ್ಯದ ಅಭಿವೃದ್ಧಿ ವಿಷಯಕ್ಕೆ ಒತ್ತು: ಶಾನವಾಜ್ ಹುಸೇನ್
ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ಮುಂದುವರೆಸುವ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರ ಸೂಚನೆಯನ್ನು ಬಿಜೆಪಿ ಸ್ವಾಗತಿಸಿದೆ.
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ಮುಂದುವರೆಸುವ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರ ಸೂಚನೆಯನ್ನು ಬಿಜೆಪಿ ಸ್ವಾಗತಿಸಿದೆ.
"ಮುಖ್ಯಮಂತ್ರಿಯಾಗಿದ್ದ ಮುಫ್ತಿ ಮೊಹಮ್ಮದ್ ಸಯೀದ್ ಅವರ ನಿಧನಕ್ಕೂ ಮುನ್ನ ಪಿಡಿಪಿಯೊಂದಿಗೆ ಮೈತ್ರಿ ಸರ್ಕಾರವಿತ್ತು, ಜಮ್ಮು-ಕಾಶ್ಮೀರದ ಅಭಿವೃದ್ಧಿ ದೃಷ್ಟಿಯಿಂದಾಗಿ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು, ಇದೇ ನಿಲುವನ್ನು ಈಗಲೂ ಹೊಂದಿದ್ದೇವೆ" ಎಂದು ಬಿಜೆಪಿ ನಾಯಕ ಶಾನವಾಜ್ ಹುಸೇನ್ ಹೇಳಿದ್ದಾರೆ.
ಮೈತ್ರಿ ಸರ್ಕಾರ ಮುಂದುವರೆಸುವುದಕ್ಕೆ ಪಿಡಿಪಿಯಿಂದಲೇ ವಿಳಂಬ ಉಂತಾಗುತ್ತಿತ್ತು. ಯಾವುದೇ ಸಮಸ್ಯೆಯನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬಹುದು, ರಾಜ್ಯದಲ್ಲಿ ಒಳ್ಳೆಯ ಸರ್ಕಾರ ಇರಬೇಕು ಎಂಬುದು ನಮ್ಮ ಅಭಿಪ್ರಾಯ. ಪಿಡಿಯವರು ಯಾವ ಮಾರ್ಗ ಅನುಸರಿಸುತ್ತಾರೆ ಎಂಬುದು ಅವರು ಯೋಚಿಸಬೇಕಾದ ವಿಚಾರ ಎಂದು ಶಾನವಾಜ್ ಹುಸೇನ್ ತಿಳಿಸಿದ್ದಾರೆ.
ಬಿಜೆಪಿಯೊಂದಿಗೆ ಸರ್ಕಾರ ರಚಿಸಲು ಸಮಸ್ಯೆ ಇಲ್ಲ ರಾಜ್ಯದ ಹಿತಾಸಕ್ತಿಗಾಗಿ ಅಲ್ಲದೇ ಅಧಿಕಾರ ಹಿಡಿದರೆ ಅಂಥಹ ಅಧಿಕಾರದಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದ ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಬಿಜೆಪಿಯೊಂದಿಗೆ ಮೈತ್ರಿ ಸರ್ಕಾರ ಮುಂದುವರೆಸುವ ಸೂಚನೆ ನೀಡಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.