ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ 
ದೇಶ

ಇರಾನಿ ಕಾರು ಅಪಘಾತ: ಸಚಿವೆ ಸೇರಿ 4 ಗಾಯ, ಬೈಕ್ ಸವಾರ ಸಾವು

ಉತ್ತರಪ್ರದೇಶದ ಆಗ್ರಾದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ನಡೆದಿದೆ...

ನವದೆಹಲಿ; ಉತ್ತರಪ್ರದೇಶದ ಆಗ್ರಾದಿಂದ ದೆಹಲಿಗೆ ತೆರಳುತ್ತಿದ್ದ ವೇಳೆ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರು ಕಾರು ಅಪಘಾತಕ್ಕೀಡಾಗಿದ್ದು, ಕೂದಲೆಳೆ ಅಂತರಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಯುಮುನಾ ಎಕ್ಸ್ ಪ್ರೆಸ್ ವೇನಲ್ಲಿ ಭಾನುವಾರ ನಡೆದಿದೆ.

ಘಟನೆ ವೇಳೆ ಇರಾನಿ ಅವರ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೆ, ಘಟನೆ ವೇಳೆ ಸಚಿವೆಯ ಬೆಂಗಾವಲು ಪಡೆ ವಾಹನದ ಮುಂದೆ ಬೈಕ್ ನಲ್ಲಿ ಹೋಗುತ್ತಿದ್ದ ಸವಾರ ರಮೇಶ್ ಕುಮಾರ್ ಎಂಬ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆಂದು ತಿಳಿದುಬಂದಿದೆ.

ಬೆಂಗಾವಲು ಪಡೆ ವಾಹನದ ಮುಂದೆ ಬೈಕಿನಲ್ಲಿ ಹೋಗುತ್ತಿದ್ದ ಸವಾರ ಮೊದಲು ಹೋಂಡಾ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ನಂತರ ಸರಣಿ ಅಪಘಾತ ಉಂಟಾಗಿರುವುದಾಗಿ ತಿಳಿದುಬಂದಿದೆ.

ಘಟನೆ ವೇಳೆ ಇರಾನಿಯವರ ಭದ್ರತಾ ಪಡೆಯ ಮೂವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲು ಇರಾನಿಯವರು ನೆರವಾಗಿದ್ದಾರೆಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!