ಪ್ರಧಾನ ಮಂತ್ರಿ ನರೇಂದ್ರ ಮೋದಿ(ಸಂಗ್ರಹ ಚಿತ್ರ) 
ದೇಶ

ಮಹಿಳಾ ಸಬಲೀಕರಣದಿಂದ ದೇಶ ಅಭಿವೃದ್ಧಿ: ನರೇಂದ್ರ ಮೋದಿ

ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ...

ನವದೆಹಲಿ: ದೇಶದ ಅಭಿವೃದ್ಧಿಗೆ ಮಹಿಳೆಯರ ಸಶಕ್ತೀಕರಣ ಮುಖ್ಯ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ಅವರು ದೆಹಲಿಯಲ್ಲಿಂದು ಮಹಿಳಾ ಶಾಸಕಿಯರ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಭಾರತ ಬಲಿಷ್ಟ ದೇಶವಾಗಿ ಬೆಳೆಯಲು ಮಹಿಳೆಯರನ್ನು ಸಬಲೀಕರಣಗೊಳ್ಳಬೇಕು ಎಂದರು.

ಮೂಲಭೂತ ಸೌಕರ್ಯ ಅಭಿವೃದ್ಧಿ, ರಸ್ತೆ, ಬಜೆಟ್ ಇವುಗಳಿಂದ ಮಾತ್ರವೇ ದೇಶ ಉದ್ದಾರವಾಗುವುದಿಲ್ಲ. ಇಲ್ಲಿನ ನಾಗರಿಕರು ಮುಖ್ಯವಾಗಿ ಮಹಿಳೆಯರ ಕೈಯಲ್ಲಿ ದೇಶದ ಅಭಿವೃದ್ಧಿಯಿದೆ. ಒಂದು ಮನೆಯನ್ನು ಬೆಳಗಲು ಹೆಣ್ಣುಮಕ್ಕಳು ಹೇಗೆ ಕಾರಣಕರ್ತರಾಗುತ್ತಾರೆಯೋ ಹಾಗೆಯೇ ದೇಶದ ಅಭಿವೃದ್ಧಿಯಲ್ಲಿ ಕೂಡ ಮಹಿಳೆಯರ ಪಾತ್ರ ಮುಖ್ಯ ಎಂದರು.

ಒಬ್ಬ ವ್ಯಕ್ತಿಯ ಬಾಳಿನಲ್ಲಿ ತಂತ್ರಜ್ಞಾನ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸುವಲ್ಲಿ ಪುರುಷರಿಗಿಂತ ಮಹಿಳೆಯರು ಹೆಚ್ಚು ಸಮರ್ಥರು ಎಂದು ನನಗೆ ಅನಿಸುತ್ತದೆ. ಮಹಿಳಾ ಸಬಲೀಕರಣಕ್ಕೆ ಜನರ ಮನೋಸ್ಥಿತಿ ಬದಲಾಗಬೇಕು. ಯಾರು ಸಮಾಜದಲ್ಲಿ ಹಿಂದೆ ಉಳಿದಿದ್ದಾರೋ ಅವರು ಬದಲಾಗಬೇಕು ಎಂದು ಪ್ರಧಾನಿ ಪ್ರತಿಪಾದಿಸಿದರು.

ಲೋಕಸಭಾ ಅಧ್ಯಕ್ಷೆ ಸುಮಿತ್ರಾ ಮಹಾಜನ್ ಈ ಸಮ್ಮೇಳನವನ್ನು ಆಯೋಜಿಸಿದ್ದರು. ಇದರಲ್ಲಿ ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಕೇಂದ್ರ ಸಚಿವೆಯರಾದ ಸುಷ್ಮಾ ಸ್ವರಾಜ್, ನಜ್ಮಾ ಹೆಫ್ತುಲ್ಲಾ, ಮನೇಕಾ ಗಾಂಧಿ, ಗುಜರಾತ್ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್, ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೊದಲಾದವರು ಭಾಗವಹಿಸಿದ್ದರು.

ನಿನ್ನೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮಹಿಳೆಯರಿಗೆ ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಮೀಸಲಾತಿ ನೀಡುವ ಸಂವಿಧಾನ ವಿಧಿ 108ನೇ ತಿದ್ದುಪಡಿ ಮಸೂದೆಯನ್ನು ಪುನಶ್ಚೇತನಗೊಳಿಸಬೇಕೆಂದು ಹೇಳಿದ್ದರು. ಕೇಂದ್ರ ಸರ್ಕಾರದ ಬೇಟಿ ಬಚಾವೋ, ಬೇಟಿ ಪಡಾವೋ ಅಭಿಯಾನವನ್ನು ಶ್ಲಾಘಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT