ಚೆನ್ನೈ; ತಮಿಳು ನಾಡಿನಲ್ಲಿರುವ ಎಲ್ಲಾ ಖಾಸಗಿ ಶಾಲೆಗಳಲ್ಲೂ ಬೆಳಗ್ಗಿನ ಅಸೆಂಬ್ಲಿ ವೇಳೆ ರಾಷ್ಟ್ರಗೀತೆಯನ್ನು ಕಡ್ಡಾಯವಾಗಿ ಹಾಡಿಸಬೇಕು ಎಂದು ಮದ್ರಾಸ್ ಹೈಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಎಂ.ಎಂ ಸುಂದರೇಶ್ ಅವರಿದ್ದ ವಿಭಾಗೀಯ ಪೀಠ ಖಾಸಗಿ ಶಾಲೆಗಳಲ್ಲಿ ರಾಷ್ಟ್ರಗೀತೆ ಹಾಡುವುದು ಕಡ್ಡಾಯಗೊಳಿಸಬೇಕು ಎಂದು ಹೇಳಿದೆ.
ಎಲ್ಲಾ ಖಾಸಗಿ ಶಾಲೆಗಳು ಪಠ್ಯಕ್ರಮದಂತೆ ರಾಷ್ಟ್ರ ಗೀತೆ ಹಾಡುವುದನ್ನು ಕಡ್ಡಾಯಗೊಳಿಸಬೇಕು ಎಂದು, ಎನ್ ಸೆಲ್ವ ತಿರುಮಲ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಇನ್ನು ಶಾಲೆಗಳು ಈ ನಿಯನವನ್ನು ಕಡ್ಡಾಯವಾಗಿ ಪಾಲಿಸುತ್ತಿವೆಯೇ, ಇಲ್ಲವೇ ಎಂಬುದರ ಬಗ್ಗೆ ಶಾಲಾ ಆಡಳಿತ ಮಂಡಳಿ ದಾಖಲೆ ಸಲ್ಲಿಸಬೇಕು ಎಂದು ಸೂಚಿಸಿದೆ.