ನವದೆಹಲಿ: ಸಮಾಜದಲ್ಲಿ ಮಹಿಳೆಯರ ಪಾತ್ರ ಅನನ್ಯವಾದದ್ದು ಎಂದು ಹೇಳಿದ ಪ್ರಧಾನಿ ನರೇಂದ್ರ ಮೋದಿ, ಮಹಿಳಾ ದಿನಾಚರಣೆಯ ಪ್ರಯುಕ್ತ ಎಲ್ಲ ಮಹಿಳೆಯರಿಗೂ ಶುಭ ಕೋರಿದ್ದಾರೆ.
ಬೆಳಗ್ಗೆ ಟ್ವೀಟ್ ಮಾಡಿದ ಮೋದಿ, ಮಹಿಳೆಯರ ಶ್ರೇಯಾಭಿವೃದ್ಧಿ ದೇಶದ ಬೆಳವಣಿಗೆಗೆ ನಾಂದಿಯಾಗುತ್ತದೆ ಎಂದು ಹೇಳಿದ್ದಾರೆ.
ಬೇಟಿ ಬಚಾವೋ, ಬೇಟಿ ಪಡಾವೋ ದಿಂದ ಆರಂಭಿಸಿ ಮಹಿಳೆಯರಿಗೆ ಉತ್ತಮ ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಯನ್ನು ನಮ್ಮ ಸರ್ಕಾರ ಕಲ್ಪಿಸಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.