ರಾಜೀವ್ ಗಾಂಧಿ ಹಂತಕಿ ನಳಿನಿ (ಸಂಗ್ರಹ ಚಿತ್ರ) 
ದೇಶ

ರಾಜೀವ್ ಹಂತಕಿ ನಳಿನಿಗೆ 1 ದಿನದ ಪೆರೋಲ್

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಆಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ನಳಿನಿ ಶ್ರೀಹರನ್ ಗೆ ನ್ಯಾಯಾಲಯ 24 ಗಂಟೆಗಳ ಪೆರೋಲ್ ಮಂಜೂರು ಮಾಡಿದೆ...

ಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಆಜೀವ ಜೈಲು ಶಿಕ್ಷೆಗೆ ಗುರಿಯಾಗಿರುವ ನಳಿನಿ ಶ್ರೀಹರನ್ ಗೆ ನ್ಯಾಯಾಲಯ 24 ಗಂಟೆಗಳ ಪೆರೋಲ್  ಮಂಜೂರು ಮಾಡಿದೆ.

ಕಳೆದ ತಿಂಗಳು ಮೃತರಾದ ನಳಿನಿ ತಂದೆಯ ಪುಣ್ಯತಿಥಿ ಇದೇ ಮಾರ್ಚ್ 9ರಂದು ನೆರವೇರಲಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 3 ದಿನಗಳ ಪೆರೋಲ್ ನೀಡಬೇಕು ಎಂದು ನಳಿನಿ ಪರ  ವಕೀಲರು ಮದ್ರಾಸ್ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯ 1 ದಿನದ ಮಟ್ಟಿಗೆ ನಳಿನಿಗೆ ಪೆರೋಲ್ ಮಂಜೂರು ಮಾಡಿದೆ.

ಮಾರ್ಚ್ 2ರಂದೇ ಜೈಲಿನಿಂದ ನಳಿನಿ ಅರ್ಜಿ ಸಲ್ಲಿಸಿದ್ದು, ವೆಲ್ಲೂರು ಜೈಲಿನ ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿರಲಿಲ್ಲ. ಹೀಗಾಗಿ ನಳಿನಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ  ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್ ನಳಿನಿಗೆ 24 ಗಂಟೆಗಳ ಪೆರೋಲ್ ಮಂಜೂರು ಮಾಡಿದೆ. ನಳಿನಿ ತಂದೆ ಶಂಕರನಾರಾಯಣ ಅವರು ನಿಧನರಾದ ಹಿನ್ನಲೆಯಲ್ಲಿ ಕಳೆದ ಫೆಬ್ರವರಿ 24  ರಂದು ನಳಿನಿಗೆ ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಳ್ಳಲು ನ್ಯಾಯಾಲಯ 12 ಗಂಟೆಗಳ ಪೆರೋಲ್ ನೀಡಿತ್ತು.

ನಳಿನಿ ತಂದೆ ಶಂಕರನಾರಾಯಣನ್ ಅವರ 16ನೇ ದಿನದ ಪುಣ್ಯತಿಥಿ ಇದೇ ಮಾರ್ಚ್ 9ರಂದು ಕೊಟ್ಟೂರಿನಲ್ಲಿ ನಡೆಯಲಿದೆ.

ತಮಿಳುನಾಡಿನ ಶ್ರೀಪೆರಂಬದೂರ್ ನಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಎಲ್ ಟಿಟಿಇ ಸಂಘಟನೆ ಆತ್ಮಹತ್ಯಾ ಬಾಂಬ್ ದಾಳಿ  ಮೂಲಕ ಹತ್ಯೆ ಮಾಡಿತ್ತು. ಪ್ರಕರಣ ಸಂಬಂಧ ಬಂಧಿತರಾಗಿದ್ದ ನಳಿನಿ ಮತ್ತು ಇತರೆ ಸಹಚರರಿಗೆ ನ್ಯಾಯಾಲಯ 1998 ಜನವರಿ 24ರಂದು ಮರಣದಂಡನೆ ಶಿಕ್ಷೆ ವಿಧಿಸಿತ್ತು. ತಮಿಳುನಾಡು  ರಾಜ್ಯಪಾಲರು 2000 ಏಪ್ರಿಲ್ 24ರಂದು ನಳಿನಿ ಶಿಕ್ಷೆಯನ್ನು ಮರಣದಂಡನೆಯಿಂದ ಜೀವಾವಧಿ ಶಿಕ್ಷೆಗೆ ಮಾರ್ಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT