ಕನ್ನೂರು: ಶಾಲಾ ಮಕ್ಕಳನ್ನು ಆಟೋ ರಿಕ್ಷಾದಲ್ಲಿ ಕರೆದೊಯ್ಯುತ್ತಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಕಾರ್ಯಕರ್ತನ ಮೇಲೆ ಸಿಪಿಎಂ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ.
ತಲಸೆರಿಯ ಪನ್ನೂರ್ ಬಳಿಯ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಆಟೋ ರಿಕ್ಷಾವನ್ನು ಅಡ್ಡಗಟ್ಟಿದ ಸಿಪಿಎಂ ಬೆಂಬಲಿಗರು ಆರ್‌ಎಸ್‌ಎಸ್ ಕಾರ್ಯಕರ್ತ ಆಟೋರಿಕ್ಷಾ ಚಾಲಕ 29 ವರ್ಷದ ಎವಿ ಬಿಜುವನ್ನು ಆರೇಳು ಮಂದಿ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಬಿಜುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ನಂತರ ಕೋಳಿಕ್ಕೋಡ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.