ದೇಶ

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಿರುವ ಆಫ್ ಲಿವಿಂಗ್‌

Srinivas Rao BV

ನವದೆಹಲಿ: ಪರಿಸರ ಹಾಳು ಮಾಡಿದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ(ಎನ್ ಜಿ ಟಿ) ಆರ್ಟ್‌ ಆಫ್ ಲಿವಿಂಗ್‌ ಫೌಂಡೇಶನ್‌ ಗೆ ಐದು ಕೋಟಿ ರುಪಾಯಿ ದಂಡ ವಿಧಿಸಿರುವುದಕ್ಕೆ ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಈ ಕುರಿತು ಮಾತನಾಡಿರುವ ಅವರು, ನ್ಯಾಯಮಂಡಳಿ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವುದಾಗಿ ಪತ್ರಕರ್ತರಿಗೆ ತಿಳಿಸಿದ್ದಾರೆ. ವಿಶ್ವ ಸಾಂಸ್ಕೃತಿಕ ಉತ್ಸವದಿಂದ ಪರಿಸರ ನಾಶವಾಗುತ್ತದೆ  ಆರೋಪಿಸಿ ಪರಿಸರ ವಾದಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಕರಣ, ಆರ್ಟ್ ಆಫ್ ಲಿವಿಂಗ್ ಗೆ 5 ಕೋಟಿ ರೂ ದಂಡ ವಿಧಿಸಿ ಉತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿತ್ತು. 
ಮಾ.11ರಿಂದ 13ರ ವರೆಗೆ ನಡೆಯಲಿರುವ ಕಾರ್ಯಕ್ರಮಕ್ಕಾಗಿ ಆರ್ಟ್‌ ಆಫ್ ಲಿವಿಂಗ್‌ ಸಂಸ್ಥೆ ಯಮುನಾ ದಂಡೆಯ ಮೇಲೆ ಬೃಹತ್‌ ವೇದಿಕೆ ಸಿದ್ಧಪಡಿಸಿದ್ದು, ಟೆಂಟ್‌ ಮತ್ತು ರಸ್ತೆಗಳನ್ನು ನಿರ್ಮಾಣ ಮಾಡಿದೆ.

SCROLL FOR NEXT