ರಾಜ್ಯಸಭೆಯಲ್ಲಿ ನರೇಂದ್ರ ಮೋದಿ
ನವದೆಹಲಿ: ಕಾಂಗ್ರೆಸ್ ಅನುಗ್ರಹವಿದೆ. ಹೀಗಾಗಿ ಆ ಪಕ್ಷಕ್ಕೆ ಯಾವತ್ತೂ ಕೆಟ್ಟ ಹೆಸರು ಬಂದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
ಇಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಪ್ರಧಾನಿ, 'ಕೆಲವು ಬಾರಿ ನನಗನಿಸುತ್ತೆ ಕಾಂಗ್ರೆಸ್ ಗೆ ವರದಾನವಿದೆ ಅಂತ. ನಾವು ಕಾಂಗ್ರೆಸ್ ಅನ್ನು ಟೀಕಿಸಿದಾಗಲೆಲ್ಲ ಮಾಧ್ಯಮಗಳು ಒಟ್ಟಾರೆ ಪ್ರತಿಪಕ್ಷಗಳ ಮೇಲೆ ವಾಗ್ದಾಳಿ ಎಂದು ಹೇಳುತ್ತವೆ. ಆದರೆ ಕಾಂಗ್ರೆಸ್ ವಿರುದ್ಧದ ಟೀಕೆ ಎಂದು ಹೇಳುವುದಿಲ್ಲ. ಹೀಗಾಗಿ ಕಾಂಗ್ರೆಸ್ ಎಂದು ಕೆಟ್ಟ ಹೆಸರು ಬರುವುದಿಲ್ಲ ಎಂದರು. ಅಲ್ಲದೆ ಜೆಡಿಯು ಹಾಗೂ ಬಹುಜನ ಸಮಾಜ ಪಕ್ಷದ ವಿಷಯದಲ್ಲಿ ಹಾಗಾಗುವುದಿಲ್ಲ ಎಂದರು.
ಇದೇ ವೇಳೆ ಗುಜರಾತ್ ಹಾಗೂ ರಾಜಸ್ಥಾನ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಕನಿಷ್ಠ ವಿದ್ಯಾರ್ಹತೆ ಕಡ್ಡಾಯಗೊಳಿಸಬೇಕು ಎಂಬ ಪ್ರತಿಪಕ್ಷಗಳ ಬೇಡಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ, ಮುಂದಿನ ತಿಂಗಳು ನಡೆಯುವ ಐದು ರಾಜ್ಯಗಳ ವಿಧಾನಸಭೆಯಲ್ಲಿ ಕಾಂಗ್ರೆಸ್ ವಿದ್ಯಾವಂತ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಿ ನೋಡೋಣ ಎಂದು ಸವಾಲು ಹಾಕಿದರು.
ಸಾವಿನ ಬಗ್ಗೆ ಕುತೂಹಲಕಾರಿ ವಿಷಯವೊಂದಿದೆ. ಸಾವನ್ನೂ ಯಾರೂ ಟೀಕಿಸುವುದಿಲ್ಲ. ಸಾವಿಗೆ ಕಾರಣವಾದುದನ್ನು ದೂಷಿಸುತ್ತಾರೆ. ಈ ತರ್ಕದ ಲಾಭವನ್ನು ಕಾಂಗ್ರೆಸ್ ಹೆಚ್ಚು ಪಡೆದುಕೊಂಡಿದೆ ಎಂಬುದು ನನ್ನ ಭಾವನೆ. ಕಾಂಗ್ರೆಸ್ ಸಾವಿನ ಬಗ್ಗೆ ಮಾತನಾಡುವುದಿಲ್ಲ. ಅದರ ಕಾರಣದ ಬಗ್ಗೆ ಮಾತನಾಡುತ್ತದೆ ಎಂದರು.
ಇನ್ನು 2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟುಗೊಳಿಸುವ ಗುರಿ ಹೊಂದಲಾಗಿದೆ ಎಂದು ಪ್ರಧಾನಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics