ಕೆಲವು ಭಾರತೀಯ ಸೈನಿಕರಿಂದ ಕಾಶ್ಮೀರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ: ಕನ್ಹಯ್ಯ ಕುಮಾರ್
ಭಾರತೀಯ ಸೈನಿಕರು ಕಾಶ್ಮೀರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತಾರೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ....
ನವದೆಹಲಿ: ದೇಶದ್ರೋಹ ಆರೋಪದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಜವಹರ್ ಲಾಲ್ ನೆಹರು ವಿವಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೆಲವು ಭಾರತೀಯ ಸೈನಿಕರು ಕಾಶ್ಮೀರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಸುತ್ತಾರೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಜವಹರ್ ಲಾಲ್ ನೆಹರು ವಿವಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕನ್ಹಯ್ಯ ಕುಮಾರ್, ಸಶಸ್ತ್ರ ಪಡೆಗಳಿಂದ ವಿಶೇಷ ಅಧಿಕಾರ ಕಾಯಿದೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದ್ದು ಅದರ ವಿರುದ್ಧ ತಾವು ದನಿ ಎತ್ತುವುದಾಗಿ ಹೇಳಿದ್ದಾರೆ.
ದೇಶದ್ರೋಹ ಆರೋಪದ ಮೇಲೆ ಫೆಬ್ರವರಿ 12 ರಂದು ದೆಹಲಿ ಪೊಲೀಸರು ಕನ್ಹಯ್ಯ ಕುಮಾರ್ ಅವರನ್ನು ಬಂಧಿಸಿದ್ದರು. ನಂತರ ಕನ್ಹಯ್ಯ ಕುಮಾರ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.