ಇಟಾ: ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ಉತ್ತರಪ್ರದೇಶದ ಇಟಾ ಜಿಲ್ಲೆಯ ಕೀಲರ್ಮೌ ಎಂಬ ಹಳ್ಳಿಯಲ್ಲಿ ನಡೆದಿದೆ.
ಮಾರ್ಚ್ 2ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ರಮಕಾಂತ್ ಎಂಬುವ ವ್ಯಕ್ತಿ ನನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ದೂರಿದ್ದಾಳೆ.
ಅತ್ಯಾಚಾರವೆಸಗಿದಲ್ಲದೇ, ನನ್ನ ಮೇಲೆ ಹಲ್ಲೆ ಮಾಡಿದ್ದಾನೆ ಎಂದು ಅತ್ಯಾಚಾರಕ್ಕೊಳಗಾದ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಆದರೆ, ಆರೋಪಿ ವಿರುದ್ಧ ಎಫ್ ಐಆರ್ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾಳೆ.