ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಆಮ್ ಆದ್ಮಿ ಪಕ್ಷದ 6 ಮಂದಿಗೆ ಸ್ಥಳೀಯ ನ್ಯಾಯಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ನ್ಯಾಯಾಲಯ ಜಾರಿ ಮಾಡಿರುವ ಸಮನ್ಸ್ ನಲ್ಲಿ ಏ.7ರಂದು ಹಾಜರಾಗುವಂತೆ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಆಶುತೇಷ್, ಸಂಜಯ್ ಸಿಂಗ್, ರಾಘವ್ ಚಾಧಾ ಹಾಗೂ ದೀಪಕ್ ಬಾಜ್ ಪೇಯಿಗೆ ತಿಳಿಸಿದೆ.
ಡಿಡಿಸಿಎ ಹಗರಣ ಸಂಬಂಧ ತಮ್ಮ ವಿರುದ್ಧ ಆಪ್ ನಾಯಕರು ಸುಳ್ಳು ಆರೋಪ ಮಾಡಿದ್ದಾರೆಂದು ಹೇಳಿದ್ದ ಜೇಟ್ಲಿ ಅವರು 6 ನಾಯಕರನ ವಿರುದ್ಧ ಮಾನನಷ್ಟ ಪ್ರಕರಣವನ್ನು ದಾಖಲು ಮಾಡಿದ್ದರು.