ನವದೆಹಲಿ: ರಿಯಲ್ ಎಸ್ಟೇಟ್ ವಲಯವನ್ನು ನಿಯಂತ್ರಿಸುವ ಹಾಗೂ ಗ್ರಾಹಕರ ಹಿತಾಸಕ್ತಿ ರಕ್ಷಿಸುವ ರಿಯಲ್ ಎಸ್ಟೇಟ್ ನಿಯಂತ್ರಣ ವಿಧೇಯಕಕ್ಕೆ ಗುರುವಾರ ರಾಜ್ಯಸಭೆ ಅಂಗೀಕಾರ ನೀಡಿದೆ.
ರಿಯಲ್ ಎಸ್ಟೇಟ್ ವಲಯವನ್ನು ನಿಯಂತ್ರಿಸುವ ಈ ವಿಧೇಯಕ, ರಿಯಲ್ ಎಸ್ಟೇಟ್ ಕುಳಗಳಿಗೆ ಕಡಿವಾಣ ಹಾಕಿ, ಮನೆ ಹಾಗೂ ನಿವೇಶನ ಕೊಳ್ಳುವವರಿಗೆ ಹೆಚ್ಚಿನ ಅಧಿಕಾರ ನೀಡಲಿದೆ.
2022ರ ವೇಳೆಗೆ ಎಲ್ಲರಿಗೂ ಮನೆ ನೀಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಭರವಸೆಯನ್ನು ಈಡೇರಿಸಲು ಈ ವಿಧೇಯಕ ಸಹಕಾರಿಯಾಗಲಿದೆ.