ಗ್ರಾಮೀಣ ಮಹಿಳೆಯರ ರು.8000 ಕೋಟಿ ಎಲ್ ಪಿಜಿ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ
ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ 8 ಸಾವಿರ ಕೋಟಿ ರುಪಾಯಿ ಮೊತ್ತದ...
ನವದೆಹಲಿ: ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉಚಿತ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ 8 ಸಾವಿರ ಕೋಟಿ ರುಪಾಯಿ ಮೊತ್ತದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಗುರುವಾರ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಗ್ರಾಮೀಣ ಪ್ರದೇಶಕ್ಕೆ ಅಡುಗೆ ಅನಿಲ (ಎಲ್ಪಿಜಿ) ಸಂಪರ್ಕ ಕಲ್ಪಿಸುವ 8000 ಕೋಟಿ ರುಪಾಯಿ ಮೊತ್ತದ ಎಲ್ ಪಿಜಿ ಯೋಜನೆಗೆ ಒಪ್ಪಿಗೆ ನೀಡಿದೆ ಎಂದು ಇಂಧನ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೇಳಗಿನ ಮಹಿಳೆಯರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ನೀಡುವ ಬಗ್ಗೆ ವಿತ್ತ ಸಚಿವ ಅರುಣ್ ಜೇಟ್ಲಿ ತಮ್ಮ 2016-17ನೇ ಸಾಲಿನ ಬಜೇಟ್ ನಲ್ಲಿ ಪ್ರಕಟಿಸಿದ್ದರು.
ರತ್ನ ತೈಲ ಮತ್ತು ಅನಿಲ ಕ್ಷೇತ್ರವನ್ನು ಎಸ್ಸಾರ್ನಿಂದ ಒಎನ್ಜಿಸಿಗೆ ಹಿಂದಿರುಗಿಸಲೂ ಸಂಪುಟ ಒಪ್ಪಿಗೆ ನೀಡಿದೆ. ಜೊತೆಗೆ ಕೈರ್ನ್ನ ರಾಜಸ್ಥಾನ ಬ್ಲಾಕ್ ಹೊರತು ಪಡಿಸಿ 28 ತೈಲ ಮತ್ತು ಅನಿಲ ಕ್ಷೇತ್ರಗಳ ಪರವಾನಗಿ ವಿಸ್ತರಣೆಗೂ ಸಂಪುಟ ಅನುಮೋದನೆ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.