ಅಮಿತಾಬ್ ಠಾಕೂರ್ 
ದೇಶ

ಸಿಎಂ ನಿವಾಸದ ಎದುರು ಐಪಿಎಸ್‌ ಅಧಿಕಾರಿ ಅಮಿತಾಬ್ ಧರಣಿ

ಸೇವೆಯಿಂದ ಅಮಾನತುಗೊಂಡಿರುವ ಐಪಿಎಸ್‌ ಅಧಿಕಾರಿ ಅಮಿತಾಬ್‌ ಠಾಕೂರ್‌ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ನಿವಾಸದ ಎದುರು ಧರಣಿ ಆರಂಭಿಸಿದ್ದಾರೆ...

ಲಖನೌ: ಸೇವೆಯಿಂದ ಅಮಾನತುಗೊಂಡಿರುವ ಐಪಿಎಸ್‌ ಅಧಿಕಾರಿ ಅಮಿತಾಬ್‌ ಠಾಕೂರ್‌ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ನಿವಾಸದ ಎದುರು ಧರಣಿ ಆರಂಭಿಸಿದ್ದಾರೆ.

ಅಮಾನತುಗೊಂಡಿರುವ ಅಧಿಕಾರಿಗಳ ಬಗ್ಗೆ ಸರ್ಕಾರ ತಾರತಮ್ಯ ಎಸಗುತ್ತಿದೆ ಎಂದು ಆರೋಪಿಸಿರುವ ಅಮಿತಾಬ್ ಅಖಿಲೇಶ್ ಯಾದವ್ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟ್ಟಿದ್ದರು. ಈ ವೇಳೆ ಪೊಲೀಸರು ತಡೆದಿದ್ದರಿಂದ ರಸ್ತೆ ಮಧ್ಯದಲ್ಲೇ ಧರಣಿ ಆರಂಭಿಸಿದರು.

ಹಿರಿಯ ನಾಗರಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಖನೌ ಡಿಐಜಿ ಡಿ.ಕೆ. ಚೌಧರಿ ಅವರನ್ನು ಸೇವೆಯಿಂದ ಅಮಾನತು ಮಾಡಿದ 15 ದಿನಗಳಲ್ಲಿಯೇ ಮರುನೇಮಕ ಮಾಡಿಕೊಳ್ಳಲಾಗಿದೆ. ಆದರೆ, ತಮ್ಮ ಪ್ರಕರಣದಲ್ಲಿ ಸರ್ಕಾರ ಅದೇ ರೀತಿ ನಡೆದುಕೊಳ್ಳದೇ ತಾರತಮ್ಯ ಎಸಗುತ್ತಿದೆ ಎಂದು ಅಮಿತಾಬ್‌ ಠಾಕೂರ್‌ ಆರೋಪಿಸಿದ್ದಾರೆ.

ಅನ್ಯಾಯದ ವಿರುದ್ಧ ದನಿ ಎತ್ತಿದ್ದ ತಮ್ಮನ್ನು 2015ರ ಜುಲೈನಲ್ಲಿ ಅಮಾನತು ಮಾಡಲಾಗಿದ್ದು, ಇದುವರೆಗೂ ಮುಂದುವರಿಸಲಾಗಿದೆ. ಆದರೆ, ನಿಯಮದ ಪ್ರಕಾರ ಅಮಾನತು ಆದೇಶವನ್ನು 90 ದಿನಗಳ ಒಳಗಾಗಿ ನವೀಕರಣ ಮಾಡದಿದ್ದರೆ ಅದು ಅನೂರ್ಜಿತವಾಗುತ್ತದೆ ಎಂದು ಡಿಜಿಪಿ ಜಾವೀದ್‌ ಅಹಮದ್‌ ಅವರಿಗೆ ಈ ಮೇಲ್‌ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT