ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಬಿಹಾರದ ಅಭಿವೃದ್ಧಿಗೆ ಆದ್ಯತೆ: ಪ್ರಧಾನಿ ಮೋದಿ

ಬಿಹಾರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ನರೇಂದ್ರ ಮೋದಿ - ನಿತಿಶ್ ಕುಮಾರ್
Lingaraj Badiger
Updated On : 12 Mar 2016, 6:21 am
ಹಜಿಪುರ: ಬಿಹಾರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಇಂದು ಹಜಿಪುರದಲ್ಲಿ ನಿರ್ಮಾಣವಾಗಿರುವ ನೂತನ ದಿಘಾ-ಸೋನೆಪುರ್ ರೈಲ್ ಹಾಗೂ ರಸ್ತೆ ಸೇತುವೆ ಉದ್ಘಾಟಿಸಿ ಮಾತನಾಡಿದ ಮೋದಿ, ಭಾರತದ ಅಭಿವೃದ್ಧಿಯಲ್ಲಿ ಬಿಹಾರದ ಬೆಳವಣಿಗೆ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಭಾರತದ ಅಭಿವೃದ್ಧಿಯಲ್ಲಿ ದೇಶದ ಪೂರ್ವ ಭಾಗಗಳು ಪ್ರಮುಖ ಪಾತ್ರವಹಿಸಲಿವೆ ಎಂದರು.
ಈ ಸೇತುವೆಯ ಅಗತ್ಯ ಎಷ್ಟಿತ್ತು ಎಂಬುದು ಇಲ್ಲಿನ ಜನರ ಉತ್ಸಾಹವನ್ನು ಗಮನಿಸಿದರೆ ಗೊತ್ತಾಗುತ್ತೆದೆ ಎಂದರ ಪ್ರಧಾನಿ, ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಮತ್ತು ಬಿಹಾರ ಮುಖ್ಯಮಂತ್ರಿ ನಿತಿಶ್ ಕುಮಾರ್ ಅವರು ರೇಲ್ವೆ ಸಚಿವರಾಗಿದ್ದ ಸಂದರ್ಭದಲ್ಲಿ ಈ ಯೋಜನೆ ಆರಂಭವಾಗಿತ್ತು. ಈಗ ಅದು ಮುಕ್ತಾಯಗೊಂಡಿದೆ ಎಂದರು.

Advertisement

Advertisement

ಒಂದು ವೇಳೆ ಕಳೆದ 10 ವರ್ಷಗಳಿಂದ ಈ ಯೋಜನೆಯನ್ನು ನಿರ್ಲಕ್ಷಿಸದಿದ್ದರೆ ಐದರಿಂದ ಏಳು ವರ್ಷಗಳಲ್ಲೇ ಯೋಜನೆ ಮುಕ್ತಾಯವಾಗುತ್ತಿತ್ತು. ಆದರೆ ವಿಳಂಬವಾಗಿದ್ದರಿಂದ 600 ಕೋಟಿಯ ಯೋಜನೆ ಇಂದು 3000 ಕೋಟಿ ರುಪಾಯಿಗೆ ತಲುಪಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments