ನವದೆಹಲಿ: ಜಮ್ಮು-ಕಾಶ್ಮೀರ ರಾಜ್ಯಪಾಲ ಎನ್ ಎನ್ ವೋಹ್ರಾ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತವಿರುವುದರಿಂದ ಕೇಂದ್ರದ ಯೋಜನೆಗಳ ಜಾರಿ ಕುರಿತು ರಾಜ್ಯಪಾಲರೇ ಗೃಹ ಸಚಿವರಿಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ 80 ,000 ಕೋಟಿ ವಿಶೇಷ ಪ್ಯಾಕೇಜ್ ಜಾರಿ ಬಗ್ಗೆ ರಾಜನಾಥ್ ಸಿಂಗ್ ಅವರಿಗೆ ವೋಹ್ರಾ ಮಾಹಿತಿ ನೀಡಿದ್ದಾರೆ.
ಈ ಭೇಟಿ ವೇಳೆ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚನೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಲಾಗುತ್ತಿದೆ. 2015 ರ ನವೆಂಬರ್ 7 ರಂದು ಪ್ರಧಾನಿ ನರೇಂದ್ರ ಮೋದಿ ಜಮ್ಮು-ಕಾಶ್ಮೀರಕ್ಕೆ 800 ಕೋಟಿ ರೂಪಾಯಿಯ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದರು.