ಕೊಚ್ಚಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ತೃಣಮೂಲ ಕಾಂಗ್ರೆಸ್ ಶನಿವಾರ 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಕೇರಳ ಟಿಎಂಸಿ ಅಧ್ಯಕ್ಷ ಮನೋಜ್ ಶಂಕರ ನೆಲ್ಲೂರ್ ಅವರು, ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ಪಕ್ಷ ಎಲ್ಲಾ 140 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದರು.
ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಒಪ್ಪಿಗೆ ಪಡೆದ ನಂತರ ಶೀಘ್ರದಲ್ಲೇ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ನೆಲ್ಲೂರ್ ಅವರು ತಿಳಿಸಿದರು. ಅಲ್ಲದೆ ಮಮತಾ ಬ್ಯಾನರ್ಜಿ ಅವರು ತಿರುವನಂತಪುರ, ಕೊಚ್ಚಿ ಹಾಗೂ ಕೊಜಿಕೊಡ್ ನಲ್ಲಿ ನಡೆಯುವ ಮೂರು ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ ಎಂದರು.